Hassan : ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಎಲ್ಎಲ್ಬಿ ವಿದ್ಯಾರ್ಥಿ (LLB Student)ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು (Beluru) ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ.

Hassan : ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಲ್ಎಲ್ಬಿ ಸಾವನ್ನಪ್ಪಿದ್ದಾನೆ. 22 ವರ್ಷದ ಚಂದನ್ ಎಂಬಾತ ಮೃತ ದುರ್ದೈವಿಯಾಗಿದ್ದಾನೆ.
ಹಾಸನದಲ್ಲಿ ಜೀಪ್–ಬೈಕ್ ಅಪಘಾತ
ಇನ್ನು ಬೈಕ್ ಕಾಲೇಜಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಇನ್ನು ಬೈಕ್ನಲ್ಲಿ ಹಿಂಬದಿ ಕುಳಿತಿದ್ದ ಭರತ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಬೈಕ್ ಡಿಕ್ಕಿಯಾಗಿ ಲಾರಿ ಪಲ್ಟಿ- ಇಬ್ಬರ ಸ್ಥಿತಿ ಗಂಭೀರ!
ಎಲ್ಎಲ್ಬಿ ವಿದ್ಯಾರ್ಥಿ ಸಾವು
ಕಾಲೇಜಿಗೆ ತೆರಳುತ್ತಿದ್ದ ಚಂದನ್ ಸವಾರಿಯ ಬೈಕ್ಗೆ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಜೀಪ್ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಚಂದನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ದುರಂತ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
MUST WATCH: ಲಾರಿಗಳ ನಡುವೆ ಭೀಕರ ಅಪಘಾ* – ಸ್ಥಳದಲ್ಲಿಯೇ ಇಬ್ಬರ ದುರ್ಮರ*




