Bengaluru: ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥರನ್ನಾಗಿ ಮಾಡಿ ತಾಯಿ (Mother) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ (Guddadahalli) ನಡೆದಿದೆ.

Bengaluru : ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಮಾನಸಿಕ ಖಿನ್ನತೆಯಿಂದಾದ ದುರ್ಘಟನೆಯೊಂದು ನಡೆದಿದೆ. ಸೌಭಾಗ್ಯ (31) ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬಾಲಕರನ್ನು ಅನಾಥರನ್ನಾಗಿ ಮಾಡಿದ್ದಾರೆ.
ತಾಯಿ ಆತ್ಮಹತ್ಯೆ, ಇಬ್ಬರು ಮಕ್ಕಳು ಅನಾಥ
ಎರಡು ವರ್ಷಗಳ ಹಿಂದೆ ಗಂಡನ ಸಾವಿನಿಂದ ಮನೋವೈಕಲ್ಯಕ್ಕೆ ಒಳಗಾದ ಸೌಭಾಗ್ಯ, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ನಲ್ಲಿ ಬಾಡಿಗೆ ಮನೆಯಲ್ಲಿ ಮಕ್ಕಳೊಂದಿಗೆ ವಾಸಿಸುತ್ತಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರೆಂದು ತಿಳಿದುಬಂದಿದೆ.

ಇದನ್ನೂ ಓದಿ : Benagluru : ಕಾಲೇಜು ವಿದ್ಯಾರ್ಥಿನಿ ಪಿಜಿಯಲ್ಲಿ ಆತ್ಮಹತ್ಯೆ
ಮಾನಸಿಕ ಖಿನ್ನತೆ ಕಾರಣ ತಾಯಿ ಆತ್ಮಹತ್ಯೆ
ಗಂಡನಿಲ್ಲ ಎಂಬ ಕಾರಣದಿಂದ ಮಾನಸಿಕವಾಗಿ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಹಿಳೆ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಪೊಲೀಸರ ತನಿಖೆ ಪ್ರಾರಂಭ
ಸದ್ಯ ಘಟನೆಯ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
MUST WATCH: WIFE SUICIDE | ಗಂಡನ ಅಕ್ರಮ ಸಂಬಂಧಕ್ಕೆ ಚೆಲುವೆ ಬಲಿಯಾದ್ಳಾ?




