RV Devraj Passes Away : ನಿನ್ನೆ ತಡರಾತ್ರಿ ಮೃತಪಟ್ಟ ಕಾಂಗ್ರೆಸ್ ಮಾಜಿ ಶಾಸಕ ಆರ್ವಿ ದೇವರಾಜ್ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಆರ್.ವಿ. ದೇವರಾಜ್ (RV Devraj) ಅವರ ಅಂತ್ಯಕ್ರಿಯೆಯನ್ನು ನಾಳೆ (ಡಿಸೆಂಬರ್ 3) ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ಜಯದೇವ ಆಸ್ಪತ್ರೆಯಿಂದ ಅಂಬುಲೆನ್ಸ್ ಮೂಲಕ ಅವರ ಪಾರ್ಥಿವ ಶರೀರವನ್ನು ಕಲಾಸಿಪಾಳ್ಯದಲ್ಲಿರುವ ಮನೆಯಲ್ಲಿ ಇರಿಸಲಾಯಿತು.
ಸೋಮನಹಳ್ಳಿಯ ತೋಟಮನೆಯಲ್ಲಿ ಅಂತ್ಯಕ್ರಿಯೆ
ಇಂದು ಬೆಳಗ್ಗೆ 10 ಗಂಟೆಯ ನಂತರ ಜೆಸಿ ರಸ್ತೆಯ ಪಕ್ಷದ ಕಚೇರಿ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ದೇವರಾಜ್ ಅವರ ಹುಟ್ಟುಹಬ್ಬದ ಹಿನ್ನೆಲೆ, ಕನಕಪುರದ ಸೋಮನಹಳ್ಳಿಯ ತೋಟಮನೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬ ಸದಸ್ಯರು ಅಂತಿಮ ವಿಧಿಗಳ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇದನ್ನು ಓದಿ : ನಾಟಿಕೋಳಿ ಮೆನು ಸವಿಯಲು ಡಿಕೆಶಿ ನಿವಾಸಕ್ಕೆ ಆಗಮಿಸಿದ CM
ಹೃದಯಾಘಾತದಿಂದ ಸಾವು
ಹುಟ್ಟುಹಬ್ಬದ ಪೂಜಾ ಕಾರ್ಯಕ್ರಮಕ್ಕಾಗಿ ಚಾಮುಂಡಿ ಬೆಟ್ಟದ ದರ್ಶನಕ್ಕೆ ತೆರಳಿದ್ದ ದೇವರಾಜ್, ನಿನ್ನೆ ರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಹೃದಯಾಘಾತವಾಗಿದೆ.
ತಕ್ಷಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ರಾಜಕೀಯ ಬದುಕಿನ ಸಂಕ್ಷಿಪ್ತ ನೋಟ
1957ರಲ್ಲಿ ಜನಿಸಿದ ಆರ್.ವಿ. ದೇವರಾಜ್ ಮೂರು ಬಾರಿ ಶಾಸಕ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. 1989ರಲ್ಲಿ ಮೊದಲ ಬಾರಿ ಶಾಸಕರಾದ ಅವರು, ನಂತರ ಎರಡು ಬಾರಿ ಕೆಎಸ್ಆರ್ಟಿಸಿ ಅಧ್ಯಕ್ಷ ಹಾಗೂ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು.
2004ರಲ್ಲಿ ಚಾಮರಾಜಪೇಟೆ ಕ್ಷೇತ್ರವನ್ನು ಎಸ್.ಎಂ. ಕೃಷ್ಣ ಅವರಿಗೆ ಬಿಡುವ ಮೂಲಕ ದೇವರಾಜ್ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದರು.
2018 ಮತ್ತು 2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ ಅವರು, ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ವಿರುದ್ಧ ಸೋಲುಂಡಿದ್ದರು. ಆರ್.ವಿ. ದೇವರಾಜ್ ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯದ ರಾಜಕೀಯ ವಲಯಕ್ಕೆ ದೊಡ್ಡ ನಷ್ಟ ಉಂಟಾಗಿದೆ.

ಇದನ್ನು ನೋಡಿ : GUBBI | ದೇಗುಲಕ್ಕೆ ಕನ್ನ ಹಾಕಿದ ಐನಾತಿಗಳು- ಹುಂಡಿಯನ್ನೇ ದೋಚಿ ಎಸ್ಕೇಪ್




