BS Yediyurappa : ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್ ಯಡಿಯೂರಪ್ಪ ಅರ್ಜಿ ವಜಾಗೊಳಿಸಿತ್ತು. ಇದೀಗ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BSY) ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ (Pocso) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
BSY ಅವರಿಗೆ ಸಮನ್ಸ್ ಜಾರಿ
ಪೋಕ್ಸೋ ಪ್ರಕರಣದಲ್ಲಿ ಕೆಳ ಹಂತದ ನ್ಯಾಯಾಲಯವು ಆರೋಪ ನಿಗದಿಗೆ BSY ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಈ ಸಮನ್ಸ್ ಅನ್ನು ಪ್ರಶ್ನಿಸಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್ಗೆ ಮುಂದುವರೆಯುವಂತೆ ಅನುಮತಿ ನೀಡಿತ್ತು.
ಅದಾದ ಬಳಿಕ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನು ಓದಿ : RV Devraj|ನಾಳೆ ಕನಕಪುರದಲ್ಲಿ ಆರ್ವಿ ದೇವರಾಜ್ ಅಂತ್ಯಕ್ರಿಯೆ

ಏನಿದು ಪ್ರಕರಣ?
2024ರ ಮಾರ್ಚ್ನಲ್ಲಿ, 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಯಡಿಯೂರಪ್ಪ ವಿರುದ್ಧ ದಾಖಲಾಗಿತ್ತು. ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಸಹಾಯಕ್ಕಾಗಿ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ಅವರ ನಿವಾಸಕ್ಕೆ ಬಂದಾಗ BSY ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಂತರ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಅದನ್ನು ಸಿಐಡಿಗೆ (CID) ವರ್ಗಾವಣೆ ಮಾಡಿತ್ತು.
CID ತನಿಖೆ ಮತ್ತು ಚಾರ್ಜ್ಶೀಟ್
2024ರ ಜೂನ್ನಲ್ಲಿ, ಸಾಕ್ಷ್ಯ ನಾಶಪಡಿಸಿದ ಹಾಗೂ ಪ್ರಕರಣವನ್ನು ಮುಚ್ಚಲು ಯತ್ನಿಸಿದ ಆರೋಪಗಳನ್ನೂ ಒಳಗೊಂಡಂತೆ, ಸಿಐಡಿ ಯಡಿಯೂರಪ್ಪ ಮತ್ತು ಅವರ ಮೂವರು ಆಪ್ತರ ವಿರುದ್ಧ 750 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.
ಈ ಪ್ರಕರಣದಲ್ಲಿ ದೂರು ನೀಡಿದ್ದ ಬಾಲಕಿಯ ತಾಯಿ ಮತ್ತು ಆ ಬಾಲಕಿ ಇಬ್ಬರೂ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ. ಬಾಲಕಿಯ ತಾಯಿ ಮೇ 26, 2024ರಂದು ನಿಧನರಾದರು.

ಇದನ್ನು ನೋಡಿ : ಇಂದು ಡಿಕೆಶಿ ಬ್ರದರ್ಸ್ ಜೊತೆ ಸಿಎಂ ಬ್ರೇಕ್ ಫಾಸ್ಟ್ – ಪವರ್ ಶೇರಿಂಗ್ ಆಗುತ್ತೋ..ಇಲ್ಲವೋ..?




