Fire Incident : ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿಯಲ್ಲಿ ನಡೆದಿದೆ.

Fire Incident : ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ (Maize) ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ : ಪೋಕ್ಸೋ ಕೇಸ್ – BSY ಗೆ ಸುಪ್ರೀಂನಿಂದ ಬಿಗ್ ರಿಲೀಫ್
4 ಲಕ್ಷ ಮೌಲ್ಯದ ಬೆಳೆ ನಷ್ಟ
ಗ್ರಾಮದ ರೈತ ದ್ಯಾಮನಗೌಡ ನೀರಲಗಿ (Dhyamanagouda Neeralagi) ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ ಸುಟ್ಟು ಭಸ್ಮವಾಗಿದೆ. 10 ಎಕರೆ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳದ ರಾಶಿ ಸಂಪೂರ್ಣವಾಗಿ ನಾಶವಾಗಿದೆ. ಈ ಘಟನೆಯಿಂದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಬೆಳೆ ನಷ್ಟವಾಗಿದೆ.
ಪ್ರಕರಣ ದಾಖಲು
ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯ ಸಂಬಂಧ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ಪ್ರಾರಂಭವಾಗಿದೆ.
ಇದನ್ನು ನೋಡಿ : ಟಿ20 ವಿಶ್ವಕಪ್ ಗೆದ್ದ ಅಂಧ ಮಹಿಳೆಯರು – ಶಿರಾದ ದೀಪಿಕಾಗೆ ಪ್ರಶಂಸೆಯ ಸುರಿಮಳೆ




