Accident: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ (Siddapura) ಗ್ರಾಮದ ಬಳಿ ನಡೆದಿದೆ.

Accident: ಬಾಗಲಕೋಟೆ–ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ – ನಾಲ್ವರು ಯುವಕರ ದುರ್ಮರಣ
ಅಪಘಾತದಲ್ಲಿ ಸಿದ್ದಾಪುರ ಗ್ರಾಮದವರಾದ ವಿಶ್ವನಾಥ ಕಂಬಾರ (17) ಗಣೇಶ್ ಅರಳಿಮಟ್ಟಿ (20) ಪ್ರವೀಣ ಶೇಡಬಾಳ (22) ಪ್ರಜ್ವಲ್ ಶೇಡಬಾಳ (17) ಮೃತಪಟ್ಟಿದ್ದಾರೆ.

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ
ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ, ಅದೇ ದಾರಿಗೆ ಬಂದ ಕಾರು ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆತನು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: Bagalkote : ಹೆರಿಗೆ ಬಳಿಕ ಹೃದಯಾಘಾತ – ಜೀವ ಕಳೆದುಕೊಂಡ ಬಾಣಂತಿ
ಜಮಖಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸದ್ಯ ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ಜಮಖಂಡಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
MUST WATCH: TERRIBLE BUS ACCIDENT | ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿ – ಓರ್ವ ಸಾವು ಹಲವರಿಗೆ ಗಂಭೀರ ಗಾಯ




