ಇಂದು ದಕ್ಷಿಣ ಕನ್ನಡ ಪ್ರವಾಸ ಕೈಕೊಂಡಿರುವ cm Siddaramaiah.

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ (Dakshina Kannada) ಕೈಗೊಂಡಿದ್ದು, ಜಿಲ್ಲೆಯಲ್ಲಿ ಆಯೋಜಿಸಿರುವ ಅನೇಕ ಮಹತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಲಿದ್ದಾರೆ.
ಮಂಗಳೂರಿಗೆ ಸಿದ್ದು ಎಂಟ್ರಿ
ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆಯ ಮಂಗಳ ಗಂಗೋತ್ರಿಯಲ್ಲಿ ನಡೆಯುವ ಶತಮಾನದ ಪ್ರಸ್ತಾನ – ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ ಹಾಗೂ ಯತಿಪೂಜೆ ಉದ್ಘಾಟನಾ ಸಮಾರಂಭಗಳಲ್ಲೂ ಸಿದ್ದು ಪಾಲಗೊಳ್ಳಲ್ಲಿದ್ದಾರೆ.

ಇದನ್ನು ಓದಿ : Accident|ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ – ನಾಲ್ವರು ಯುವಕರು ದುರ್ಮರಣ!
ವಿವಿಧ ಕಾರ್ಯಕ್ರಮಗಳ ಉದ್ಘಾಟನೆ
ಮಧ್ಯಾಹ್ನ 12:30ಕ್ಕೆ ಪೇಸ್, ಜ್ಞಾನನಗರ, ಕೊಣಾಜೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದು, ಪೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರ, ಪೇಸ್ ಟ್ರೈಡ್ ಪಾರ್ಕ್, ಪೇಸ್ ಸ್ಪೋರ್ಟ್ಸ್ ಅರೆನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳ ಉದ್ಘಾಟನೆ ನಡೆಯಲಿದೆ.
ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ CM ಸಭೆ
ಮಧ್ಯಾಹ್ನ 1:15ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್ನಲ್ಲಿ CM Siddaramaiah ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್ ಸದಸ್ಯರನ್ನು ಭೇಟಿ ಮಾಡುವುದರೊಂದಿಗೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಮತ್ತು ಸಮಗ್ರ ಸಮನ್ವಯಕ್ಕೆ ಸಂಬಂಧಿಸಿದ ಹಲವಾರು ಮಹತ್ವದ ವಿಚಾರಗಳು ಇಂದು ನಡೆಯುವ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಇನ್ನು ಸಂಜೆ 4:30ಕ್ಕೆ CM ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿನತ್ತ ವಾಪಸ್ಸಾಗಲಿದ್ದಾರೆ.
ಇದನ್ನು ನೋಡಿ : ಬೆಂಗಳೂರಿಗೆ ಮೋದಿ 5,700 ಇ-ಬಸ್ ಗಿಫ್ಟ್ – ತೇಜಸ್ವಿ ಸೂರ್ಯ ಹರ್ಷ




