Electrocution Death : ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಡಿಕೆ ಕಟಾವು ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ (Kalkere) ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ : ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವು!
ಅಡಿಕೆ ಮರದಲ್ಲಿ ಕೆಲಸ ಮಾಡುತ್ತಿದ್ದಾಗ ಸಾವು
ಮೃತ ವ್ಯಕ್ತಿಯನ್ನು ಯೋಗೀಶ್ (31) ಎಂದು ಗುರುತಿಸಲಾಗಿದೆ. ಕಾಲ್ಗೆರೆ ಗ್ರಾಮದ ಯೋಗೀಶ್ ಅಡಿಕೆ ಮರದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಇನ್ನು ಘಟನೆಯ ನಂತರ ಭರಮಸಾಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಭರಮಸಾಗರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಇದನ್ನು ನೋಡಿ : ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ಕೋರಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್




