ಕೆಂಗೇರಿ METRO ನಿಲ್ದಾಣದಲ್ಲಿ ಟ್ರ್ಯಾಕ್ಗೆ ಹಾರಿ ವ್ಯಕ್ತಿಯ ಆತ್ಮಹತ್ಯೆ – ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

METRO ರೈಲು ಬರುತ್ತಿದ್ದಂತೆ ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ (Purple Line) ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಜಯಪುರದ ಶಾಂತಗೌಡ ಪಾಟೀಲ್ (38) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಮತ್ತು ಪುಟ್ಟ ಮಗುವಿನ ಜೊತೆ ವಾಸಿಸುತ್ತಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ : ಗೃಹಲಕ್ಷ್ಮೀಯರಿಗೆ Good News – 30 ಸಾವಿರದಿಂದ 3 ಲಕ್ಷದವರೆಗೆ Personal Loan..!

ಮೆಟ್ರೋ ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಇನ್ನು ಈ ಅವಘಡ ಇಂದು ಬೆಳಗ್ಗೆ ನಡೆದಿದೆ. ಮೆಟ್ರೋ ಬರುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್ಗೆ ಹಾರಿದ್ದು, ಪರಿಣಾಮ ಮೆಟ್ರೋ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಸಿಬ್ಬಂದಿ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಶವವನ್ನು ಟ್ರ್ಯಾಕ್ನಿಂದ ತೆರವುಗೊಳಿಸಲಾಗಿದೆ.
ಸಂಚಾರದಲ್ಲಿ ವ್ಯತ್ಯಯ!
ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆ ನೇರಳೆ ಮಾರ್ಗದಲ್ಲಿ ಕೆಲವು ಹೊತ್ತು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಚಲ್ಲಘಟ್ಟದಿಂದ ನಾಯಂಡಹಳ್ಳಿವರೆಗೆ ಮೆಟ್ರೋ ಓಡಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ ಮೆಟ್ರೋ ಎಂದಿನಂತೆ ಸಂಚಾರ ಆರಂಭಿಸಿದೆ.

ಇದನ್ನು ನೋಡಿ : ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್




