ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ – ನಡುರಸ್ತೆಯಲ್ಲಿ ಕೊಚ್ಚಿ Murder

ಬೆಂಗಳೂರಿನಲ್ಲಿ ನಡುಬೀದಿಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ Murder ಮಾಡಲಾಗಿದೆ. ಯುವತಿಯೊಬ್ಬಳನ್ನು ಆತ ಪ್ರೀತಿಸಿದ್ದು, ಇದಕ್ಕಾಗಿ ತಕರಾರು ಉಂಟಾಗಿತ್ತು. ಇದೇ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ದೊಡ್ಡಬಳ್ಳಾಪುರ ನಗರದ ಯಲಹಂಕ- ಹಿಂದೂಪುರ ರಸ್ತೆಯ ಚರ್ಚ್ ಮುಂಭಾಗದಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಮಾರಕಾಸ್ತ್ರಗಳಿಂದ ಯುವಕನ ಭೀಕರ Murder!
ಪವನ್ ಕುಮಾರ್ (30) ಕೊಲೆಯಾದ ಯುವಕ. ಮೃತ ಪವನ್ ಜಾಲಪ್ಪ ಕಾಲೇಜಿನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಕಾಲೇಜಿನ ವಸತಿ ಗೃಹದಲ್ಲೇ ತಾಯಿಯೊಂದಿಗೆ ವಾಸವಾಗಿದ್ದರು. ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ಫೋನ್ ಮಾಡಿ ಹೊರಗೆ ಕರೆಸಿಕೊಂಡಿದ್ದಾರೆ. ಆಟೋದಲ್ಲಿ ಬರುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಆಟೋವನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ತೀವ್ರ ಹಲ್ಲೆಯಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನು ನೋಡಿ : TUMAKURU | ನಿರ್ವಹಣೆ ಇಲ್ಲದೇ ಸೊರಗುತ್ತಿವೆ ಪಾರ್ಕ್ಗಳು- ಇದ್ದು ಇಲ್ಲದಂತಾಗಿವೆ ಉದ್ಯಾನವನಗಳು

ಪ್ರೀತಿ ವಿಚಾರಕ್ಕೆ ಯುವಕನ ಹತ್ಯೆಗೈದಿರುವ ಶಂಕೆ
ಮೃತ ಪವನ್ನ ಚಿಕ್ಕಮ್ಮ ಅನಿತಾ ನೀಡಿರುವ ಮಾಹಿತಿಯ ಪ್ರಕಾರ, ಪವನ್ ಒಬ್ಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಹಿಂದೆ ಗಲಾಟೆ ನಡೆದಿತ್ತು. ಕೆಲವು ಮಂದಿ ಬೆದರಿಕೆ ಹಾಕಿದ್ದು, ನಂತರ ಇಬ್ಬರೂ ದೂರವಾದ್ದರು. ಆದರೆ ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ಇದೆ ಎಂದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಭೇಟಿ, ಪರಿಶೀಲನೆ
ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ಡಿವೈಎಸ್ಪಿ ಪಾಡುರಂಗ, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿ, ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಲಾಗಿದೆ.
ಇದನ್ನು ಓದಿ : ಮೆಟ್ರೋ ಟ್ರ್ಯಾಕ್ಗೆ ಹಾರಿ ವ್ಯಕ್ತಿ Suicide





