Accident: ಶಿವಮೊಗ್ಗ ತಾಲೂಕಿನ ಆಯನೂರು ಕೋಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Accident: ಶಿವಮೊಗ್ಗ ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಯನೂರು ಕೋಟೆ ಬಳಿ ಎರಡು ಬೈಕ್ಗಳ ಮುಖಾಮುಖಿ ಡಿಕ್ಕಿ
ಇನ್ನು ಅಪಘಾತದಲ್ಲಿ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಕಿಫ್ (21) ಮತ್ತು ಚಾಂದ್ ಪೀರ್ (18) ಎಂಬುವರು ಮೃತದುರ್ದೈವಿಗಳಾಗಿದ್ದಾರೆ. ಇನ್ನು ಕ್ಯಾತಿನಕೆರೆ ಗ್ರಾಮದ ನಿವಾಸಿ 27 ವರ್ಷದ ಗುರುಕಿರಣ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪರಿಚಿತ ವಾಹನ ಡಿಕ್ಕಿಯಿಂದ ಇಬ್ಬರ ಸಾವು
ಅಕಿಫ್ ಮತ್ತು ಚಾಂದ್ ಪೀರ್ ಆಯನೂರಿನಿಂದ ಹಾರನಹಳ್ಳಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ, ಈ ವೇಳೆ ಗುರುಕಿರಣ್ ಚಾಮೇನಹಳ್ಳಿಯಿಂದ ಆಯನೂರು ಕಡೆಗೆ ಬೈಕ್ ನಲ್ಲಿ ಬರುತ್ತಿದ್ದಾಗ ಎರಡು ಬೈಕ್ ಗಳು ಆಯನೂರು ಕೋಟೆ ಬಳಿ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿಯ ರಭಸಕ್ಕೆ ಅಕಿಫ್ ಮತ್ತು ಚಾಂದ್ ಪೀರ್ ಮೇಲೆ ಹಿಂದಿನಿಂದ ಅತೀ ವೇಗವಾಗಿ ಬಂದ ಯಾವುದೋ ಅಪರಿಚಿತ ವಾಹನ ಹರಿದು ಹೋಗಿದೆ.
ಇದನ್ನೂ ಓದಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ – ನಾಲ್ವರು ಯುವಕರ ದುರ್ಮರಣ!

ಇಬ್ಬರು ಯುವಕರ ದಾರುಣ ಅಂತ್ಯ
ಇನ್ನು ವಾಹನ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಗುರುಕಿರಣ್ ಎಂಬಾತನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ
ಸದ್ಯ ವಿಷಯ ತಿಳಿದು ಕುಂಸಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಡಿದ್ದಾರೆ.
MUST WATCH: ಪೊಲೀಸ್ ಠಾಣೆ ಬಳಿಯೇ ಭೀಕರ ಮರ್ಡರ್! ಕೊಲೆ ಪಾತಕರು ಯಾರು ಗೊತ್ತಾ.?




