Karwar jail Attack : ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಭಾನುವಾರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಜೈಲಿನಲ್ಲಿ ಮಾದಕ ವಸ್ತುಗಳನ್ನು ತೀವ್ರವಾಗಿ ನಿಯಂತ್ರಿಸಿದ್ದಕ್ಕೆ ಖ್ಯಾತ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಭೀಕರ ಹಲ್ಲೆ ನಡೆಸಿದ್ದಾರೆ.

ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬ ಇಬ್ಬರು ಆರೋಪಿಗಳು, ಜೈಲರ್ ಕಲ್ಲಪ್ಪ ಗಸ್ತಿ ಹಾಗೂ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಜೈಲಿನಲ್ಲಿ ಮಾದಕ ವಸ್ತುಗಳನ್ನು ಪುನಃ ಸೇರಿಸಲು ಅವಕಾಶ ಬೇಡಿದಾಗ, ಜೈಲರ್ ಅದನ್ನು ನೇರವಾಗಿ ನಿರಾಕರಿಸಿದ್ದರಿಂದ ಆರೋಪಿಗಳು ಆಕ್ರೋಶಗೊಂಡಿದ್ದರು ಎಂದು ಪ್ರಾಥಮಿಕ ಮಾಹಿತಿ.
ಇದನ್ನೂ ಓದಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ – ನಾಲ್ವರು ಯುವಕರ ದುರ್ಮರಣ!
ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಜೈಲರ್ ಹಾಗೂ ಸಿಬ್ಬಂದಿಯನ್ನು ತಕ್ಷಣ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಆರೋಪಿಗಳಿಬ್ಬರು ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದು, ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾದ ಕಾರಣ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಜೈಲಿನೊಳಗೆ ಮಾದಕ ವಸ್ತುಗಳ ಮೇಲಿನ ನಿಯಂತ್ರಣವನ್ನು ಕಠಿಣಗೊಳಿಸಿರುವುದೇ ಈ ದಾಳಿಗೆ ಕಾರಣವಾಗಿರುವುದಾಗಿ ತಿಳಿದುಬಂದಿದೆ.
ಘಟನೆಯ ಬಳಿಕ ಜೈಲು ಭದ್ರತೆ ಹೆಚ್ಚಿಸಲಾಗಿದ್ದು, ಆರೋಪಿಗಳ ವಿರುದ್ಧ ಹೆಚ್ಚುವರಿ ಕೇಸು ದಾಖಲಾಗಿದೆ.
MUST WATCH: ಪೊಲೀಸ್ ಠಾಣೆ ಬಳಿಯೇ ಭೀಕರ ಮರ್ಡರ್! ಕೊಲೆ ಪಾತಕರು ಯಾರು ಗೊತ್ತಾ.?