
KARNATAKA RAIN : ರಾಜ್ಯಾದ್ಯಂತ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಲವೆಡೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯ ಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂ ತರ, ಚಾಮರಾಜನಗರ, ಚಿಕ್ಕಬ ಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಗಾಣಗಾಪುರ, ಕೆರೂರು, ಮುಂಡಗೋಡು, ಬನವಾಸಿ, ಬೆಳ್ಳೂರು, ಕೋಟಾ, ಟಿಜಿ ಹಳ್ಳಿ, ಉಡುಪಿ, ಆಗುಂಬೆ, ಬೈಲಹೊಂಗಲ, ಬಂಡೀಪುರ, ಭಾಲ್ಕಿ, ಗೋಪಾಲನಗರ, ಗೋಕಾಕ್, ಕಿಬ್ಬನಹಳ್ಳಿ, ರೋಣ, ಸೈದಾಪುರ, ಉಪ್ಪಿನಂಗಡಿಯಲ್ಲಿ ಈಗಾಗಲೇ ಧಾರಾಕಾರ ಮಳೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದರೂ, ಬಿಸಿಲು ಕೂಡ ಗೋಚರಿಸುತ್ತಿದೆ.




