ಗೋವಾ ನೈಟ್ ಕ್ಲಬ್ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ : ಸಿಲಿಂಡರ್ ಸ್ಫೋಟ ಶಂಕೆ.

ಉತ್ತರ ಗೋವಾದ ನೈಟ್ಕ್ಲಬ್ (Night Club) ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ Fire Accident ನಲ್ಲಿ ನಾಲ್ವರು ಪ್ರವಾಸಿಗರು ಸೇರಿ 25 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. LPG Cylinder ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದು, ಈ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಗೋವಾ ನೈಟ್ ಕ್ಲಬ್ ಬೆಂಕಿ ದುರಂತಕ್ಕೆ ಕಾರಣವೇನು?
ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ಕ್ಲಬ್ (Birch by Romeo Lane Club) ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಕ್ಲಬ್ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ. ಇನ್ನು ಗೋವಾ ಪೊಲೀಸರ ಹೇಳಿಕೆ ಪ್ರಕಾರ, ಉತ್ತರ ಗೋವಾದ ಅರ್ಪೋರಾದ ಬಿರ್ಚ್ ಬೈ ರೋಮಿಯೋ ಲೇನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 25 ಜನರು ಸಾವನ್ನಪ್ಪಿದ್ದಾರೆ.
ಇದನ್ನು ಓದಿ : Ind vs SA|ಸೌತ್ ಆಫ್ರಿಕಾ ವಿರುದ್ದದ ಪಂದ್ಯದಲ್ಲಿ ಟೀಂ ಇಂಡಿಯಾಗೆ 271 ರನ್ಗಳ ಗುರಿ

ಇನ್ನು ಮೃತರಲ್ಲಿ ನಾಲ್ವರು ಪ್ರವಾಸಿಗರು, 14 ಮಂದಿ ಸಿಬ್ಬಂದಿ ಸೇರಿದ್ದು, ಏಳು ಜನರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಲ್ಲದೆ, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಬೆಂಕಿಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಯಿಂದ ತನಿಖೆ ಮುಂದುವರೆದಿದೆ ಎನ್ನಲಾಗಿದೆ.

ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ
ಈ ದುರ್ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ PM Narendra Modi ತಲಾ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಮೋದಿ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ನಲ್ಲಿರುವ ಫೇಮಸ್ ನೈಟ್ ಕ್ಲಬ್ನಲ್ಲಿ ತಡರಾತ್ರಿ ಸಂಭವಿಸಿದ Fire Accident ನಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನು ನೋಡಿ : ಕಾಂಗ್ರೆಸ್ಸನ್ನ ರಾಜ್ಯದಿಂದ ಒದ್ದು ಹೊರ ಹಾಕ್ತೀವಿ – ಶಾಸಕ SURESH GOWDA ಸರ್ಕಾರದ ವಿರುದ್ಧ ಕಿಡಿ




