Satish Jarakiholi : ಸಿಎಂ ಕುರ್ಚಿ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಕಾಂಗ್ರೆಸ್ ಪಕ್ಷ ಒಂದು ಶಿಸ್ತಿನ ಪಕ್ಷ, ಹೈಕಮಾಂಡ್ ನಾಯಕರೇ ಫೈನಲ್ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Satish Jarakiholi : ಮುಂದೆ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕಾಗಿ ಜಿಲ್ಲಾಡಳಿತವು ಎಲ್ಲಾ ಸಿದ್ದತೆಗಳನ್ನ ಮಾಡಿಕೊಂಡಿದೆ ಎಂದು ಲೊಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದೇವೆ
ಹಾವೇರಿ ಪಟ್ಟಣದ ಸಂತೆ ಮೈದಾನದಲ್ಲಿ ಏರ್ಪಡಿಸಿದ್ದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಯಾಶೀರ ಖಾನ್ ಪಠಾಣ್ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರ್ಚಿ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿರೋದ್ರಿಂದ ಅಂತಿಮ ನಿರ್ಧಾರವನ್ನ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದರು. ಅಲ್ಲದೇ ನಮ್ಮ ಪಕ್ಷದಲ್ಲಿ ಯಾವುದೇ ಆಂತರಿಕ ಅಸಮಾಧಾನಗಳಿಲ್ಲ ಎಂದರು.

ಇದನ್ನೂ ಓದಿ : Satish Jarakiholi : ಹೊಸ ಅತ್ಯಾಧುನಿಕ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ
ಬಿಜೆಪಿಯ ಟೀಕೆ–ಟಿಪ್ಪಣಿಗೆ ಪ್ರತಿಕ್ರಿಯೆ ಅಗತ್ಯವಿಲ್ಲ
ರಾಜ್ಯದ ಜನರ ಸೇವೆ ಮಾಡುವುದು ಸರ್ಕಾರದ ಪ್ರಮುಖ ಗುರಿ ಎಂದು ಜಾರಕಿಹೊಳಿ ಹೇಳಿ, ಬಿಜೆಪಿಯಿಂದ ಬರುತ್ತಿರುವ ಟೀಕೆ–ಟಿಪ್ಪಣಿಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು. ಉಪ ಲೋಕಾಯುಕ್ತರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ತಾವು ರಾಜ್ಯದ ಎಲ್ಲಾ ಭಾಗಗಳಲ್ಲಿ ಸಂಚರಿಸುವುದು ಸಾಮಾನ್ಯ ವಿಷಯ ಎಂದು ಹೇಳಿದರು.

ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸುತ್ತಿದ್ದೀವೆ!
ಶಿಗ್ಗಾಂವ–ಸವಣೂರು ಕ್ಷೇತ್ರದ ಕುರಿತು ಮಾತನಾಡಿದ ಸಚಿವರು, ಜನರು ಕಾಂಗ್ರೆಸ್ ಪಕ್ಷಕ್ಕೆ ಜಯ ನೀಡಿದ್ದಾರೇ ಹೊರತು ಬೇರೆ ಯಾವುದಕ್ಕೂ ಅವಕಾಶ ನೀಡಿಲ್ಲ ಎಂದು ಹೇಳಿದರು. ಚುನಾವಣೆಯ ವೇಳೆ ನೀಡಿದ್ದ ಭರವಸೆಗಳಂತೆ ಕ್ಷೇತ್ರಕ್ಕೆ ಆಗಮಿಸಿರುವುದಾಗಿ ತಿಳಿಸಿದರು.
MUST WATCH : ಕಾಂಗ್ರೆಸ್ಸನ್ನ ರಾಜ್ಯದಿಂದ ಒದ್ದು ಹೊರ ಹಾಕ್ತೀವಿ – ಶಾಸಕ SURESH GOWDA ಸರ್ಕಾರದ ವಿರುದ್ಧ ಕಿಡಿ




