Chikkamagaluru News : ಚಿಕ್ಕಮಗಳೂರು ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತ ಬಂಧನಕ್ಕೊಳಗಾಗಿದ್ದಾನೆ.

Chikkamagaluru News : ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತ ಮಿಥುನ್ ಭಾಗಿಯಾಗಿರುವುದು ಪತ್ತೆಯಾಗಿದೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಅವರ ಪಾತ್ರ ದೃಢಪಟ್ಟ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ನಂತರ ಮಿಥುನ್ ಅವರನ್ನು ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುವಂತೆ ಆದೇಶಿಸಿದ್ದಾರೆ.
ಗಣೇಶ್ ಹತ್ಯೆ ಪ್ರಕರಣದಲ್ಲಿ A6 ಆಗಿರುವ ಮಿಥುನ್, A1 ಸಂಜಯ್ನ ಸ್ನೇಹಿತನಾಗಿದ್ದು, RSS ಮತ್ತು ಬಜರಂಗ ದಳದ ಸಕ್ರಿಯ ಕಾರ್ಯಕರ್ತ ಎಂದು ಮಾಹಿತಿ ದೊರೆತಿದೆ. ಈಗಾಗಲೇ A1 ಸಂಜಯ್ ಮತ್ತು A3 ನಾಗಭೂಷಣ್ ಬಂಧಿತರಾಗಿದ್ದು, A2 ನಿತಿನ್, A4 ದರ್ಶನ್ ಮತ್ತು ಅಜಯ್ ತಲೆಮರೆಸಿಕೊಂಡಿರುವ ಕಾರಣ ಅವರಿಗಾಗಿ ಹುಡುಕಾಟ ಮುಂದುವರಿದಿದೆ.
ಇದನ್ನು ಓದಿ : Ind vs SA|ಸೌತ್ ಆಫ್ರಿಕಾ ವಿರುದ್ದದ ಪಂದ್ಯದಲ್ಲಿ ಟೀಂ ಇಂಡಿಯಾಗೆ 271 ರನ್ಗಳ ಗುರಿ

ಡಿಸೆಂಬರ್ 5ರ ರಾತ್ರಿ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ವಿವಾದದಿಂದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ (40) ಅವರ ಮೇಲೆ ಬೈಕ್ನಲ್ಲಿ ಬಂದ ಹಂತಕರು ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದರು.
ಕಿರಿದಾದ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಗಣೇಶ್ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ನಂತರ, ಮಚ್ಚನ್ನು ಅಲ್ಲಿ ಬಿಸಾಡಿ ಹಂತಕರು ಪರಾರಿಯಾಗಿದ್ದರು.
ಘಟನೆಯ ನಂತರ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅವರ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಶೋಧ ಆರಂಭಿಸಲಾಯಿತು.
ಸಖರಾಯಪಟ್ಟಣದಲ್ಲಿ ಬಿಗಿ ಬಂದೋಬಸ್ತ್
ಗಣೇಶ್ ಗೌಡ ಹತ್ಯೆ ಪ್ರಕರಣದ ನಂತರ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಚಿಕ್ಕಮಗಳೂರು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಸಖರಾಯಪಟ್ಟಣದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಜಾರಿಗೊಳಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಪ್ರಮುಖ ರಸ್ತೆಗಳಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರು ಕಾವಲು ನಿಂತಿದ್ದಾರೆ.
ಇದನ್ನು ನೋಡಿ : ಕಾಂಗ್ರೆಸ್ಸನ್ನ ರಾಜ್ಯದಿಂದ ಒದ್ದು ಹೊರ ಹಾಕ್ತೀವಿ – ಶಾಸಕ SURESH GOWDA ಸರ್ಕಾರದ ವಿರುದ್ಧ ಕಿಡಿ




