Ramanagara : ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವು

ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ Ramanagara ದ ರೇವಣಸಿದ್ದೇಶ್ವರ ಬೆಟ್ಟದಲ್ಲಿ (Revanasiddeshwara Hill) ನಡೆದಿದೆ.
ಇದನ್ನು ಓದಿ : ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ
ಬೆಟ್ಟ ಹತ್ತುವಾಗ ಸಾವು
ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಮೃತ ದುರ್ದೈವಿ. ರೇವಣ್ಣ ಅವರು ಇಂದು ಕುಟುಂಬದ ಜೊತೆ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದರು. ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲು
ಇನ್ನು ಈ ದುರಂತದ ಬಗ್ಗೆ ಮಾಹಿತಿ ದೊರೆತ ತಕ್ಷಣ ರಾಮನಗರ ಗ್ರಾಮಾಂತರ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಕಂದಕದಿಂದ ಮೇಲಕ್ಕೆತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಮನೆಗಳ ದಾಖಲೆ ನೀಡುವಂತೆ ಜನರಿಗೆ ಇಓ ನೋಟಿಸ್ – ನ್ಯಾಯಕ್ಕಾಗಿ ಜನರ ಹೋರಾಟ




