ನಾಳೆಯಿಂದ ಅಧಿವೇಶನ – Belagavi ಸುವರ್ಣಸೌಧದ ಸುತ್ತ ಹೈಅಲರ್ಟ್ : 6,000 ಪೊಲೀಸ್ ಭದ್ರತೆ.

ನಾಳೆ Belagavi ಯ ಸುವರ್ಣಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ (Belagavi Session) ಕ್ಕಾಗಿ ಕುಂದಾನಗರಿ ಸಂಪೂರ್ಣ ಸಜ್ಜಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಡಳಿತ ಈಗಾಗಲೇ 3 ಸಾವಿರ ಕೊಠಡಿಗಳನ್ನು ಬುಕ್ ಮಾಡಿದೆ. CM ಮತ್ತು DCM ಗೆ ಅತಿಥಿ ಗೃಹದಲ್ಲಿ ವಿಶೇಷ ವಾಸ್ತವ್ಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಸುವರ್ಣಸೌಧದ ಸುತ್ತಮುತ್ತ High Alert
ಅಧಿವೇಶನದ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿ ಕೆಂಪು ಕೋಟೆ ಬಳಿ ನಡೆದ Car Blast ಪ್ರಕರಣದ ನಂತರ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸುವರ್ಣಸೌಧದ ಸುತ್ತಮುತ್ತ High Alert ಘೋಷಿಸಲಾಗಿದೆ.
ಇದನ್ನು ಓದಿ : ದೊಡ್ಡಪ್ಪನ್ನೇ ಕೊಲೆಗೈದ ತಮ್ಮನ ಮಗ – Murder ಗೆ ಬೆಚ್ಚಿಬಿದ್ದ ಜನರು
6 ಸಾವಿರ ಪೊಲೀಸರ ಭದ್ರತೆ
ಬೆಳಗಾವಿ ನಗರದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 6 ಎಸ್ಪಿ ದರ್ಜೆಯ ಪೊಲೀಸ್ ಅಧಿಕಾರಿಗಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ, 500 ಹೋಂ ಗಾರ್ಡ್ಸ್, 8 ಕ್ಷಿಪ್ರ ಕಾರ್ಯಪಡೆ, 10 ಡಿಎಆರ್ ತುಕಡಿ, 35 ಕೆಎಸ್ಆರ್ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಫೋರ್ಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡಗಳು ಭದ್ರತೆಗಾಗಿ ನಿಯೋಜನೆಗೊಂಡಿವೆ.
ಇನ್ನು ಸುವರ್ಣ ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದ್ದು, ಸುವರ್ಣ ಗಾರ್ಡನ್ ಹಾಗೂ ಅಲಾರವಾಡ ಪ್ರದೇಶಗಳಲ್ಲಿ ಪ್ರತಿಭಟನೆಗಳಿಗೆ ವಿಶೇಷ ಸ್ಥಳಗಳನ್ನು ನಿಗದಿ ಮಾಡಲಾಗಿದೆ.
ಇದನ್ನು ನೋಡಿ : ಗಬ್ಬೆದ್ದಿವೆ MARALUR DINNEಯ ಚರಂಡಿಗಳು – ಅಧಿಕಾರಿಗಳ ವಿರುದ್ಧ ನಿವಾಸಿಗಳ ಆಕ್ರೋಶ




