ಮಂಡ್ಯದಲ್ಲಿ ಖಾಸಗಿ ಬಸ್ Accident – 30 ಮಂದಿಗೆ ಗಾಯ

ಬೆಂಗಳೂರು–ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಅಗರಲಿಂಗನದೊಡ್ಡಿ ಬಳಿ ನೆನ್ನೆ ಸಂಜೆ ಸಂಭವಿಸಿದೆ.
ಪ್ರಾಣಾಪಾಯದಿಂದ ಪಾರು
ಬೆಂಗಳೂರು ಕೆ.ಪಿ. ಅಗ್ರಹಾರದ ನಿವಾಸಿಗಳಾದ ಪ್ರಯಾಣಿಕರು ಮಳವಳ್ಳಿ ತಾಲೂಕಿನ ಶಿಂಷಾ ಸಮೀಪದ ದೇವಸ್ಥಾನಕ್ಕೆ ತೆರಳಿ, ವಾಪಸ್ ಬೆಂಗಳೂರಿಗೆ ಹೊರಟಿದ್ದ ವೇಳೆ ಈ Accident ಸಂಭವಿಸಿದೆ. ಇನ್ನು ಈ ಅಪಘಾತದಿಂದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : Winter Session|ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ
ಮಿಮ್ಸ್ ಜಿಲ್ಲಾಸ್ಪತ್ರೆಗೆ ಸ್ಥಳಾಂತರ
ಘಟನೆಯ ನಂತರ ತಕ್ಷಣ ಸ್ಥಳಕ್ಕಾಗಮಿಸಿದ ಮದ್ದೂರು ಸಂಚಾರಿ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಾಳುಗಳನ್ನು ಬಸ್ನಿಂದ ಹೊರತೆಗೆದು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಿಮ್ಸ್ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
DC ಆಸ್ಪತ್ರೆ ಭೇಟಿ
ಘಟನೆ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ ಡಾ. ಕುಮಾರ್ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯಾಧಿಕಾರಿಗಳಿಗೆ ಸಮರ್ಪಕ ಮತ್ತು ತ್ವರಿತ ಚಿಕಿತ್ಸೆ ನೀಡುವಂತೆಸೂಚನೆ ನೀಡಿದರು. ಇನ್ನು ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ.
ಇದನ್ನು ನೋಡಡಿ : ASHIKA RANGNATH IN TUMAKURU | ಪ್ರಜಾ ಶಕ್ತಿ ಟಿವಿಯೊಂದಿಗೆ ಮಿಲ್ಕಿಬ್ಯೂಟಿ – EXCLUSIVE ಮಾತುಕಥೆ ಇಲ್ಲಿದೆ ನೋಡಿ




