
HASSAN NEWS : ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳು ಶ್ರೀ ವಿದ್ಯಾ ಗಣಪತಿ ದೇವಾಲ ಯದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ್ದಾರೆ. ಈ ಕೃತ್ಯ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ.
ಈ ದೇವಾಲಯವು ಬೇಲೂರು ಪುರಸಭೆ ಆವರಣದಲ್ಲಿದ್ದು, ಪ್ರತಿದಿನವೂ ಭಕ್ತರು ಪೂಜೆ ಮಾಡುತ್ತಾರೆ. ವ್ಯಾಪಾರಿಗಳು ಕೂಡ ತಮ್ಮ ದಿನದ ವ್ಯಾಪಾರ ಆರಂಭಕ್ಕೆ ಮೊದಲು ಗಣಪತಿಗೆ ಕೈಮುಗಿದು ಹೋಗುತ್ತಾರೆ.
ಇನ್ನು ನೆನ್ನೆ ರಾತ್ರಿ ಪುರಸಭೆ ಗೇಟಿಗೆ ಬೀಗ ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದಾಗ, ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ದೃಶ್ಯ ಕಂಡುಬಂದಿದೆ. ಬಾಗಿಲು ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಈ ಅಮಾನ ವೀಯ ಕೃತ್ಯ ಎಸಗಿದ್ದಾರೆ.
ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಇಂತಹ ದುಷ್ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೋಮು ಸೌಹಾರ್ದ ಕದಡಲು ಉದ್ದೇಶಿತವಾಗಿ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸೂಕ್ತ ತನಿಖೆ ಆರಂಭಿಸಿದ್ದಾರೆ.





