ಡಿಸೆಂಬರ್ 21ರಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಖುಷಿಯಲ್ಲಿದ್ದ ಜೋಡಿಯ ಬದುಕು ರಸ್ತೆ Accident ನಲ್ಲಿ ದುರಂತ ಅಂತ್ಯ ಕಂಡಿದೆ.

ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್–ವೆಂಕಟಗಿರಿ ಕ್ರಾಸ್ ಬಳಿನೆನ್ನೆ ರಾತ್ರಿ ನಡೆದ ಭೀಕರ Accident ನಲ್ಲಿ ಮದುವೆ ದಾಂಪತ್ಯ ಜೀವನಕ್ಕೆ ಕಾಲಿಡುವ ಖುಷಿಯಲ್ಲಿದ್ದ ಜೋಡಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ದುರ್ದೈವಿಗಳನ್ನು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ನಿವಾಸಿ ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪಾವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.

ಇದನ್ನು ಓದಿ : RCB ಫ್ಯಾನ್ಸ್ಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ DK Shivakumar
ಇನ್ನೆರಡು ವಾರದಲ್ಲಿ ಮದುವೆಯಾಗಬೇಕಿದ್ದ ಜೋಡಿ
ಐದು ತಿಂಗಳ ಹಿಂದೆ ಕರಿಯಪ್ಪ ಹಾಗೂ ಕವಿತಾ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಡಿಸೆಂಬರ್ 21ರಂದು ಮದುವೆ ನಿಗದಿಯಾಗಿತ್ತು. ಮದುವೆಯ ಸಂಭ್ರಮದಲ್ಲಿ, ಭಾನುವಾರ ಬೆಳಿಗ್ಗೆ Pre wedding Photo Shoot ಗಾಗಿ ಜೋಡಿ ಮನೆಯಿಂದ ಹೊರಟಿದ್ದರು. ಹೊಸಪೇಟೆ ಪಂಪಾವನ, ಮುನಿರಾಬಾದ್ ಜಲಾಶಯ ಸೇರಿದಂತೆ ಹಲವು ಸ್ಥಳಗಳಲ್ಲಿ ಫೋಟೋಶೂಟ್ ಮುಗಿಸಿಕೊಂಡು ಸಂಜೆ ವಾಪಸ್ ಬರುತ್ತಿದ್ದ ವೇಳೆ ಈ Accident ಸಂಭವಿಸಿದೆ.
ದ್ವಿಚಕ್ರ ವಾಹನ ಸವಾರರ ಮೇಲೆ ಹರಿದ ಲಾರಿ
ಕವಿತಾ ಅವರನ್ನು ಮನೆಗೆ ಬಿಟ್ಟು ಬರಲು ಕರಿಯಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಗಂಗಾವತಿಗೆ ಹೋಗುತ್ತಿದ್ದರು. ಈ ವೇಳೆ, ವೆಂಕಟಗಿರಿಯ ಕಲ್ಲಿನ ಕ್ವಾರಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರ ಮೇಲೆ ಹರಿದಿದೆ. ಪರಿಣಾಮ, ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಯುವಕನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರೂ ಮೃತಪಟ್ಟಿದ್ದಾರೆ.

ಇದನ್ನು ನೋಡಿ : Gatha Vaibhava | ಸಿನಿಮಾಗೆ 25 ನೇ ದಿನದ ಸಂಭ್ರಮ – ಅಭಿಮಾನಿಗಳ ಜೊತೆ ಸಂಭ್ರಮಿಸಿದ ಚಿತ್ರತಂಡ




