CM Siddaramaiah: ವಿಧಾನಸಭೆ ಚುನಾವಣಾ (Assembly Election) ಅಕ್ರಮ ಆರೋಪ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ (Supreme Court) ಇಂದು ನೋಟಿಸ್ ನೀಡಿದೆ.

CM Siddaramaiah: 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿ ಸಂಬಂಧ ಸುಪ್ರೀಂ ಕೋರ್ಟ್ ಇಂದು ನೋಟಿಸ್ ನೀಡಿದೆ.
ವಿಧಾನಸಭಾ ಚುನಾವಣಾ ಅಕ್ರಮ ಆರೋಪ
ಕೆ.ಎಂ. ಶಂಕರ್ ಎಂಬುವರು, ಚುನಾವಣಾ ಪ್ರಚಾರ ವೇಳೆ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ ಸಿದ್ದರಾಮಯ್ಯ ಗೆದ್ದಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. ವಿಷಯ ಪರಿಶೀಲಿಸುತ್ತಿರುವ ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿ ಸದಸ್ಯ ಪೀಠ ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್
ಶಂಕರ್ ಅವರು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1), 123(2) ಮತ್ತು 123(4) ಉಲ್ಲಂಘನೆ ಆಗಿದ್ದು, ಮತದಾರರಿಗೆ ಆಮಿಷ ನೀಡುವ ಮೂಲಕ ಮತ ಚಲಾವಣೆ ಮಾಡುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ: ʻಏನ್ ಸಣ್ಣ ಅಗಿದ್ಯಾ? – ನಾನು ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲʼ..!!!
ಏನಿದು ಪ್ರಕರಣ ?
ಹೀಗಾಗಿ, 2023ರ ಚುನಾವಣೆಯ ಫಲಿತಾಂಶವನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಇದೇ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಸಿದ್ದರಾಮಯ್ಯ ಅವರ ಪರವಾಗಿ ವಾದಿಸಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್, ಶಂಕರ್ ಅವರ ಆರೋಪಗಳಿಗೆ ಕೌಂಟರ್ ಕೊಟ್ಟಿದ್ದರು.
ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳಿಂದ ಆಶ್ವಾಸನೆಗಳನ್ನು ನೀಡುವುದಕ್ಕೆ ಅವಕಾಶವಿದೆ ಎಂದು ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಶಂಕರ್ ಅವರ ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
MUST WATCH: ಕಾಂಗ್ರೆಸ್ಸನ್ನ ರಾಜ್ಯದಿಂದ ಒದ್ದು ಹೊರ ಹಾಕ್ತೀವಿ – ಶಾಸಕ SURESH GOWDA ಸರ್ಕಾರದ ವಿರುದ್ಧ ಕಿಡಿ




