
ಮೃತ ಶಿಕ್ಷಕ ಸಂತೋಷ್ (40)
CHIKKAMAGALURU :ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿಯ ಬಳಿ ನಡೆದ ದುರಂತದಲ್ಲಿ ಶಿಕ್ಷಕನೋರ್ವ ಪತ್ನಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ (40) ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಬಂದಿದ್ದ ಸಂತೋಷ್ ಅವರು, ರಸ್ತೆ ಬದಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಅಚಾನಕ್ ಕಾಲುಜಾರಿ ಪ್ರಪಾತಕ್ಕೆ ಬಿದ್ದರು. ಬಿದ್ದ ರಭಸಕ್ಕೆ ತಲೆಗೆ ತೀವ್ರ ಗಾಯವಾಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




