ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ 9 ನೇ ತರಗತಿ ವಿದ್ಯಾರ್ಥಿನಿ – ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

9 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲೇ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಇದು ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ನಲ್ಲಿ ವಾಸವಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ
ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿರಸಿ ತಹಶೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಆಟವಾಡುತ್ತಾ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

ಬಾಲಕಿಯ ಈ ಸ್ಥಿತಿಗೆ ಕಾರಣ ಯಾರು?
ನಮ್ಮ ಮಗಳು ಹಾಸ್ಟೆಲ್ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆತ್ತಿರುವ ಸುದ್ದಿ ಕೇಳಿ ಶಾಕ್ ಆಗಿದ್ದಾರೆ. ಬಾಲಕಿಯ ಈ ಸ್ಥಿತಿಗೆ ಕಾರಣ ಯಾರು? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ.

ಇದನ್ನು ನೋಡಿ : ಕಾಸು ಕೊಟ್ರೆ ಸಾಕು ಮಾರ್ಕ್ಸ್ ಕಾರ್ಡ್ ಸಿಗುತ್ತೆ – ಬೆಂಗಳೂರಿನಲ್ಲಿ ನಕಲಿ ಪ್ರಮಾಣ ಪತ್ರ ದಂಧೆ !




