Murder : ಮದ್ವೆಗೆ ಒಪ್ಪದೇ ಅವಾಯ್ಡ್ ಮಾಡ್ತಿದ್ದ ಪ್ರೇಯಸಿ – ಊಟಕ್ಕೆ ಕರೆದು ಕತ್ತುಕೊಯ್ದು ಕೊಂದ ಪ್ರಿಯಕರ

ಮನೆಯಲ್ಲಿ ಪ್ರೀತಿ ವಿಚಾರ ತಿಳಿದಿದ್ದರೂ ಮದುವೆಗೆ ಒಪ್ಪದೇ ಅವಾಯ್ಡ್ ಮಾಡುತ್ತಿದ್ದ ಪ್ರೇಯಸಿಯನ್ನು, ಪ್ರಿಯಕರನೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
ಮದ್ವೆಗೆ ಒಪ್ಪದೇ ಅವಾಯ್ಡ್ ಮಾಡ್ತಿದ್ದ ಪ್ರೇಯಸಿ
ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ಈ ಘಟನೆ ನಡೆದಿದ್ದು, 23 ವರ್ಷದ ಅಂಜಲಿ ಕೊಲೆಯಾದ ಪ್ರೇಯಸಿಯಾಗಿದ್ದಾಳೆ. ರಾಜೀವ್ ಎಂಬಾತ ಕೃತ್ಯ ಎಸಗಿರುವ ಪ್ರಿಯಕರ. ಪ್ರೇಯಸಿಯನ್ನ ಊಟಕ್ಕೆ ಕರೆದಿದ್ದ ಪ್ರಿಯಕರ, ಮದುವೆ ವಿಚಾರ ಪ್ರಸ್ತಾಪಿಸಿ ಗಲಾಟೆ ಮಾಡಿದ್ದಾನೆ. ಈ ವೇಳೆ ಕೋಪಕೊಂಡು ಕತ್ತುಕೊಯ್ದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ರೋಸಿಹೋಗಿದ್ದ ಪ್ರಿಯಕರ
ಅಂಜಲಿ ಮತ್ತು ರಾಜೀವ್ ಕಳೆದ ಮೂರುದಿಂದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ವಿಚಾರ ಮನೆಯವರಿಗೂ ತಿಳಿದಿತ್ತು. ಆದರೆ ರಾಜೀವ್ ವಿರುದ್ಧ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ಒಪ್ಪಿರಲಿಲ್ಲ. ಹಲವು ಬಾರಿ ಮದುವೆಗೆ ಒಪ್ಪಿಸಲು ಆಗದೇ ರಾಜೀವ್ ರೋಸಿಹೋಗಿದ್ದ. ಇತ್ತೀಚೆಗೆ ಅಂಜಲಿ ಕೂಡ ಪೋಷಕರ ಒತ್ತಾಯಕ್ಕೆ ಮಣಿದಿದ್ದಳು, ಜೊತೆಗೆ ರಾಜೀವ್ನನ್ನ ಅವಾಯ್ಡ್ ಮಾಡೋದಕ್ಕೂ ಶುರು ಮಾಡಿದ್ದಳು.
ಇದನ್ನು ಓದಿ : ಮಗ ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಸ್ನೇಹಿತನ ಬರ್ಬರ ಹತ್ಯೆ!

ಊಟಕ್ಕೆ ಕರೆದು ಕತ್ತುಕೊಯ್ದು ಕೊಂದ ಪ್ರಿಯಕರ
ನಿನ್ನೆ ಸಂಜೆ ಪ್ರೇಯಸಿಯನ್ನ ಊಟಕ್ಕೆ ಕರೆತಂದಿದ್ದ ರಾಜೀವ್, ಈ ವೇಳೆ ಮತ್ತೆ ಮದುವೆ ಪ್ರಸ್ತಾಪ ಮಾಡಿದ್ದನಂತೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಕೂಡ ಆಗಿದ್ದು, ಕೋಪಗೊಂಡ ರಾಜೀವ್, ಅಂಜಲಿ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ.
ಮೂರ್ನಾಲ್ಕು ವರ್ಷಗಳ ಪ್ರೇಮ – ಪ್ರೇಯಸಿ Murder ನಲ್ಲಿ ಅಂತ್ಯ
ಗಾಯಗೊಂಡಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ. ಮಾಹಿತಿ ತಿಳಿದ ಕೂಡಲೇ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ಡಿಕೆಶಿಯವ್ರೇ ನಿಮ್ಮ ಹಳೆ ಚಾಳಿ ಬಿಟ್ಟು ಬಿಡಿ-D.K.SHIVAKUMARಗೆ HDK ಖಡಕ್ ತಿರುಗೇಟು




