ಆಕ್ಸಲ್ ಕಟ್ ಆಗಿ ನಿಯಂತ್ರಣ ತಪ್ಪಿದ ಬಸ್ – 8 ಪ್ರಯಾಣಿಕರಿಗೆ ಗಾಯ

ಯಾದಗಿರಿ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ವೊಂದು ಪಲ್ಟಿಯಾಗಿ 8 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ವೇಳೆ ಬಸ್ನ ಆಕ್ಸಲ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನು ಓದಿ : ಟೈರ್ ಬ್ಲಾಸ್ಟ್ ಆಗಿ ಬಸ್ಸಿಗೆ ಟಿಪ್ಪರ್ ಡಿಕ್ಕಿ – ಮೂವರು ಸಾವು..!!

ಯಾದಗಿರಿಯ ಆಲ್ಹಾಳ ಗ್ರಾಮದ ಸಮೀಪ ಘಟನೆ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ಹಾಳ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಹಾಪುರ ವಿಭಾಗಕ್ಕೆ ಸೇರಿದ ಬಸ್ ಕೆಂಭಾವಿಯಿಂದ ತಾಳಿಕೋಟೆ ಕಡೆಗೆ ಪ್ರಯಾಣಿಕರೊಂದಿಗೆ ತೆರಳುತ್ತಿತ್ತು. ಈ ವೇಳೆ ಆಲ್ಹಾಳ ಗ್ರಾಮದ ಸಮೀಪ ತಲುಪುತ್ತಿದ್ದಂತೆ ಬಸ್ನ ಎಕ್ಸೆಲ್ ಏಕಾಏಕಿ ಕಟ್ ಆಗಿದೆ. ಇದ್ರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ.
8 ಪ್ರಯಾಣಿಕರಿಗೆ ಗಾಯ – ತಪ್ಪಿದ ಅನಾಹುತ
ಇನ್ನು ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಬಳಿಕ ಅವರನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಸದ್ಯ ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನು ನೋಡಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ಆಕ್ಸಿಡೆಂ* – ಭಯಾನಕವಾಗಿದೆ ಅಪಘಾ* ದ ದೃಶ್ಯ




