
ಹಿಂಡಲಗಾ ಜೈಲಿಗೆ PRAJWAL REVANNA ಶಿಫ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ!
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ವಿಚಾರದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ನೀಡಲಾಗಿದ್ದ ಆದೇಶದ ಅನುಷ್ಠಾನವನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಇನ್ನೂ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿಲ್ಲ.
ಹಿಂಡಲಗಾ ಜೈಲಿನಲ್ಲಿ ಭದ್ರತಾ ಸಮಸ್ಯೆ ಸಾಧ್ಯತೆ
ಇನ್ನು ಕಾರಾಗೃಹ ವಿಭಾಗದ ಉತ್ತರ ವಲಯದ ಡಿಐಜಿ ಆಗಿದ್ದ ಸೋಮಶೇಖರ್ ಸದ್ಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಭದ್ರತಾ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಸ್ಥಳಾಂತರ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎನ್ನಲಾಗಿದೆ.
READ THIS : ಪರಪ್ಪನ ಅಗ್ರಹಾರದಿಂದ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್ – ಕಾರಣವೇನು?

ಜೈಲು ಸ್ಥಳಾಂತರದ ಬಗ್ಗೆ ನಿರ್ಧಾರ ಸಾಧ್ಯತೆ
ಇನ್ನು ಪ್ರಜ್ವಲ್ ರೇವಣ್ಣ ಅವರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ವಿಚಾರದಲ್ಲಿ ಇಂದು, ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸ್ಥಳಾಂತರ ಆದೇಶವನ್ನು ಜಾರಿಗೊಳಿಸಬೇಕೇ ಅಥವಾ ಮುಂದೂಡಬೇಕೇ ಎಂಬುದರ ಬಗ್ಗೆ ಅಧಿಕಾರಿಗಳು ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.
ಜೈಲು ಶಿಫ್ಟ್ ಆದೇಶ ಪ್ರಶ್ನಿಸಲು ವಕೀಲರ ಸಿದ್ಧತೆ
ಮತ್ತೊಂದೆಡೆ ಜೈಲು ಸ್ಥಳಾಂತರ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಸ್ಥಳಾಂತರ ಆದೇಶ ಮುಂದುವರಿದರೆ ಸೋಮವಾರ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಆದರೆ ಅರ್ಜಿ ಸಲ್ಲಿಕೆಯ ಬಗ್ಗೆ ಇನ್ನೂ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಒಟ್ಟು 9 ಕೈದಿಗಳ ಜೈಲು ಸ್ಥಳಾಂತರಕ್ಕೆ ಸೂಚನೆ ವರದಿ
ಇನ್ನು ಪ್ರಜ್ವಲ್ ರೇವಣ್ಣ ಸೇರಿದಂತೆ ಒಟ್ಟು 9 ಮಂದಿಯನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿತ್ತು.
ಆದರೆ ಪ್ರಜ್ವಲ್ ರೇವಣ್ಣ ಅವರ ಸ್ಥಳಾಂತರ ವಿಚಾರದಲ್ಲಿ ಭದ್ರತಾ ಕಾರಣಗಳು ಎದುರಾಗಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಕ್ರಿಯೆ ಮುಂದೂಡಲಾಗಿದೆ ಎನ್ನಲಾಗಿದೆ.
MUST WATCH : ತುಮಕೂರು ಲೋಕಲ್ ಫೈಟ್ಗೆ ಮುಹೂರ್ತ – ಯಾರ ಕನಸಿಗೆ ಬ್ರೇಕ್.. ಯಾರಿಗೆ ಚಾನ್ಸ್.?





