Bus ಡಿಕ್ಕಿಯಾಗಿ ಮಗು ಸೇರಿ ಮೂವರು ಸಾ*

ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಕಾಕ ತಾಲೂಕಿನ ಕೊಣ್ಣೂರ ಬಳಿ ನಡೆದಿದೆ.
ಬೈಕ್-ಸಾರಿಗೆ Bus ನಡುವೆ ಭೀಕರ ಅಪಘಾತ..!
ಕೊಣ್ಣೂರು ಬಳಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಸಾರಿಗೆ ಬಸ್ಗೆ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ!

ಮೃತರನ್ನು ಸೈಫ್ ಮುಲ್ಲಾ, ಅವರ ಪುತ್ರಿ ಸಿಜಾ ಸೈಫ್ ಮುಲ್ಲಾ ಹಾಗೂ ಇಮ್ತಿಯಾಜ್ ಬಡಗಾಂವ ಎಂದು ಗುರುತಿಸಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಗೋಕಾಕ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
MUST WATCH: ತ್ರಿಕೋನ ಪ್ರೇಮ ಪ್ರಕರಣಕ್ಕೆ ಯುವತಿ ಬ* – ಲೈವ್ ವಿಡಿಯೋ ಮಾಡಿ ಯುವತಿ ಸೂಸೈ*




