ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಬಳಿ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ RCB ಅಭಿಮಾನಿ ಮನೋಜ್ (21) ಮೃತಪಟ್ಟಿದ್ದಾರೆ.

RCB ಚಾಂಪಿಯನ್ ಪಟ್ಟದ ಸಂಭ್ರಮದ ನಡುವೆ ದುರ್ಘಟನೆಯೊಂದು ನಡೆದಿದ್ದು, ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವ ಅಭಿಮಾನಿಯೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಸಮೀಪದ ಲಕ್ಷ್ಮೀಪುರ ಗ್ರಾಮದ ಬಳಿ ನಡೆದಿದೆ.
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ
ಮಾಹಿತಿಯ ಪ್ರಕಾರ, ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ 21 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
MUST READ : ಸೇವಾಸಿಂಧು ಫೋರ್ಟಲ್ ಮೂಲಕ Bus Pass ಗೆ ಅರ್ಜಿ ಆಹ್ವಾನ..!

ಮೃತ ಯುವಕನ ಗುರುತು
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮನೋಜ್ (21) ಎಂದು ಗುರುತಿಸಲಾಗಿದೆ. ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ನಿವಾಸಿಯಾಗಿದ್ದರು.
ಪ್ರಸ್ತುತ ಬೆಂಗಳೂರಿನ ಹೆಗ್ಗಡದೇವನಪುರ ಪ್ರದೇಶದಲ್ಲಿ ವಾಸವಿದ್ದು, ಖಾಸಗಿ ಕಂಪನಿಯಲ್ಲಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.

RCB ಸಂಭ್ರಮದ ಬಳಿಕ ನಡೆದ ದುರಂತ
ಆರ್ಸಿಬಿ ಪಂದ್ಯ ವೀಕ್ಷಿಸಿ ಸಂಭ್ರಮಾಚರಣೆ ಮುಗಿಸಿಕೊಂಡು ತಮ್ಮ ನಿವಾಸಕ್ಕೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಮನೋಜ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಈ ಸಂಬಂಧ ಚಿಕ್ಕಬಾಣಾವರ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುಡಿಆರ್ (Unnatural Death Report) ಪ್ರಕರಣ ದಾಖಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
MUST WATCH : COMMERCIAL CYLINDER ದರ ಮತ್ತೆ ಏರಿಕೆ – HOTEL ಊಟ ಮತ್ತಷ್ಟು ದುಬಾರಿಯಾಗುತ್ತಾ.?




