
ಧರ್ಮಸ್ಥಳದ ಕಾಡಿಗೆ SIT ಎಂಟ್ರಿ – ಸೌಜನ್ಯ ಮೃತದೇಹ ಸಿಕ್ಕ ಜಾಗಕ್ಕೆ ಭೇಟಿ
ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಮರುತನಿಖೆ ಚುರುಕುಗೊಂಡಿದೆ. ಬರೋಬ್ಬರಿ 14 ವರ್ಷಗಳ ಹಿಂದಿನ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ಧರ್ಮಸ್ಥಳದ ಕಾಡಿಗೆ ಭೇಟಿ ನೀಡಿದೆ.

14 ವರ್ಷಗಳ ಹಿಂದಿನ ಪ್ರಕರಣದ ಮರುತನಿಖೆ..!
ಹೌದು.. 14 ವರ್ಷಗಳ ಹಿಂದಿನ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಮರುತನಿಖೆಯ ಭಾಗವಾಗಿ ವಿಶೇಷ ತನಿಖಾ ತಂಡ ಧರ್ಮಸ್ಥಳದ ಮಣ್ಣಸಂಕದ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದೆ. ಸೌಜನ್ಯ ಮೃತದೇಹ ಪತ್ತೆಯಾಗಿದ್ದ ಸ್ಥಳದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಅಂದಿನ ಘಟನೆಯ ಸನ್ನಿವೇಶಗಳನ್ನು ಮರುಸೃಷ್ಟಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ.
READ THIS : ಸೌಜನ್ಯ ಕೇಸ್ – ತನಿಖಾಧಿಕಾರಿಯಾಗಿ ಹಿರಿಯ IPS ಅಧಿಕಾರಿ ನೇಮಕ
ತನಿಖಾಧಿಕಾರಿ ಲೋಕೇಶ್ ಜಗಲಸಾರ್ ನೇತೃತ್ವದಲ್ಲಿ ಪರಿಶೀಲನೆ
ಇನ್ನು ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸ್ಥಳದ ಭೌಗೋಳಿಕ ಪರಿಸ್ಥಿತಿ ಹಾಗೂ ಹಿಂದಿನ ಘಟನಾವಳಿಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. SIT ತನಿಖಾಧಿಕಾರಿ ಲೋಕೇಶ್ ಜಗಲಸಾರ್ ನೇತೃತ್ವದಲ್ಲಿ ಘಟನಾ ಮರುಸೃಷ್ಟಿ ಪ್ರಕ್ರಿಯೆ ನಡೆದಿದೆ. ವಿಶೇಷ ತನಿಖಾ ತಂಡದ ಜೊತೆಗೆ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ SOCO ತಂಡವೂ ಸ್ಥಳಕ್ಕೆ ಆಗಮಿಸಿದೆ.

ಮೃತದೇಹ ಪತ್ತೆಯಾದ ಸ್ಥಳ ತೋರಿಸಿದ ಕುಟುಂಬಸ್ಥರು
ಪ್ರಕರಣದ ತನಿಖೆಗೆ ಅಗತ್ಯವಿರುವ ವೈಜ್ಞಾನಿಕ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳದಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ. ಮತ್ತೊಂದೆಡೆ ಸೌಜನ್ಯ ಮೃತದೇಹ ಪತ್ತೆಯಾಗಿದ್ದ ಸ್ಥಳವನ್ನು ಕುಟುಂಬಸ್ಥರು ಎಸ್ಐಟಿ ಅಧಿಕಾರಿಗಳಿಗೆ ತೋರಿಸಿದ್ದಾರೆ. ಸೌಜನ್ಯ ಅವರ ಮಾವ ಪುರಂದರಗೌಡ ಹಾಗೂ ಸಂಬಂಧಿ ತುಕಾರಾಂ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ.
MUST WATCH : ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ನ.1 ರಿಂದ ಬಿರುಗಾಳಿ ಸಹಿತ ಭಾರಿ ಮಳೆ..!





