Udupi : ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ Udupi ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ (55) ಮತ್ತು ಅವರ ಪತ್ನಿ ಸಂಶದ್ ಬೇಗಂ (50) ಕೊಲೆಯಾದ ದಂಪತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರ ಶಾಹಿದ್ ಅಲಿ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿ ಉಂಟಾದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರೋಪಿ ಶಾಹಿದ್ ಅಲಿ ತನ್ನ ತಂದೆ-ತಾಯಿಯ ಮೇಲೆ ಸುತ್ತಿಗೆಯಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರ ರಕ್ತಸ್ರಾವ ಹಾಗೂ ತಲೆಗೆ ಬಿದ್ದ ಬಲವಾದ ಏಟಿನಿಂದಾಗಿ ದಂಪತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
READ THIS : ಹೆತ್ತ ತಂದೆಯನ್ನೇ ಕೊಲೆಗೈದ ಭೀಮಾತೀರದ ಹಂತಕಿ!

ಸ್ಥಳಕ್ಕೆ ಪೊಲೀಸರ ಭೇಟಿ
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬ್ರಹ್ಮಾವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಶಾಹಿದ್ ಅಲಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯಕ್ಕೆ ನಿಖರ ಕಾರಣವೇನು ಎಂಬುದನ್ನು ತಿಳಿದುಕೊಳ್ಳಲು ತನಿಖೆ ಮುಂದುವರಿದಿದೆ.
Udupi – ತನಿಖೆ ಚುರುಕು
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಸಂಪೂರ್ಣ ಹಿನ್ನೆಲೆ ಹಾಗೂ ಕೊಲೆಗೆ ಕಾರಣವಾದ ಅಂಶಗಳ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

MUST WATCH : DC ಕಚೇರಿ ಮುಂದೆ ಭಾರೀ ಹೈಡ್ರಾಮಾ – ಪೊಲೀಸರು ಕಾರ್ಯಕರ್ತರ ನಡುವೆ ತಳ್ಳಾಟ.!




