Raichur ಜಿಲ್ಲೆಯ ಬಿಜನಗೇರಾ ಗ್ರಾಮದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕನ ಮೇಲೆ ಬಿದ್ದ ಪರಿಣಾಮ 25 ವರ್ಷದ ಈರಣ್ಣ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Raichur : ಜಿಲ್ಲೆಯ ಬಿಜನಗೇರಾ ಗ್ರಾಮದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕನ ಮೇಲೆ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಿರಿದಾದ ರಸ್ತೆ ಈ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಮೃತ ಯುವಕನ ಗುರುತು ಪತ್ತೆ
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಈರಣ್ಣ ಗೌಡ (25) ಎಂದು ಗುರುತಿಸಲಾಗಿದೆ. ಆತ ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಟ್ರ್ಯಾಕ್ಟರ್ ಕಿರಿದಾದ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ವಾಹನ ತಗ್ಗು ಪ್ರದೇಶಕ್ಕೆ ಉರುಳಿದ್ದು, ಸುಮಾರು 25 ಅಡಿ ಆಳಕ್ಕೆ ಬಿದ್ದಿದೆ.
ಘಟನೆಯ ವೇಳೆ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಈರಣ್ಣ ಗೌಡ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
MUST READ : ಮುಂದಿನ 2 ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಭಾರೀ ಮಳೆ

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಸ್ತೆ ಅಗಲೀಕರಣಕ್ಕೆ ಗ್ರಾಮಸ್ಥರ ಒತ್ತಾಯ
ಬಿಜನಗೇರಾ ಗ್ರಾಮದ ಈ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿರುವುದು ಇದೇ ಮೊದಲಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕಿರಿದಾದ ರಸ್ತೆಯಿಂದಾಗಿ ಆಗಾಗ್ಗೆ ಅಪಘಾತಗಳು ನಡೆಯುತ್ತಿದ್ದು, ಹಲವು ಬಾರಿ ಪ್ರಾಣಹಾನಿಯೂ ಸಂಭವಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಹೀಗಾಗಿ, ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುಖ್ಯ ರಸ್ತೆಯನ್ನು ತುರ್ತಾಗಿ ಅಗಲೀಕರಣ ಮಾಡಬೇಕು ಎಂದು ಗ್ರಾಮಸ್ಥರು ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
MUST WATCH : ಗೋ ಹತ್ಯೆ ಆರೋಪ ಪ್ರಕರಣಕ್ಕೆ ಆಕ್ರೋಶ ಮಧ್ಯರಾತ್ರಿವರೆಗೂ ಸಂಘಟನೆಗಳ ಪ್ರತಿಭಟನೆ




