ರೇಣುಕಾಸ್ವಾಮಿ ಕೊಲೆ ಪ್ರಕರಣ – A14 ಪ್ರದೂಷ್ ಹೆಚ್ಚಿನ ಭದ್ರತೆ ಒದಗಿಸಲು ಕೋರ್ಟ್ ಆದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ಆಗಸ್ಟ್ 18ಕ್ಕೆ ಮುಂದೂಡಿಕೆ
ಅರ್ಜಿಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಹೊರಬಂದಿರುವ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕಿದೆ. ಹೀಗಾಗಿ ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಪ್ರಕ್ರಿಯೆಯನ್ನು ಸದ್ಯಕ್ಕೆ ಮುಂದೂಡಬೇಕು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರು ಅರ್ಜಿ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಿದರು.
ಇದನ್ನು ಓದಿ : Darshan ಗೆ ಸಂಕಷ್ಟ – ಮಾಫಿ ಸಾಕ್ಷಿ ಆಗಲು ಎ-14 ಪ್ರದೋಷ್ ಅರ್ಜಿ

A14 ಪ್ರದೂಷ್ಗೆ ಹೆಚ್ಚಿನ ಭದ್ರತೆ
ವಿಚಾರಣೆ ವೇಳೆ A14 ಪ್ರದೂಷ್ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಪ್ರದೋಷ್ಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ಸಂಬಂಧಪಟ್ಟ ಜೈಲು ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಪ್ರತ್ಯೇಕ ಸೆಲ್ನಲ್ಲಿ ಇರಿಸಲು ಸೂಚನೆ
ಪ್ರದೂಷ್ ಅವರ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಪ್ರತ್ಯೇಕ ಸೆಲ್ನಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ಮುಂದಿನ ವಿಚಾರಣೆಗಳಿಗೆ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕವೇ ಹಾಜರುಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪ್ರಕರಣದ ಮುಂದಿನ ಪ್ರಮುಖ ವಿಚಾರಣೆಗಳು ಆಗಸ್ಟ್ 18ರಂದು ನಡೆಯಲಿವೆ.
ಇದನ್ನು ನೋಡಿ : ಕೂಲಿ ಸಿಗದೇ ಕಾರ್ಮಿಕರ ಕಣ್ಣೀರು – ಅಧಿಕಾರಿಗಳಿಗೆ KHANDRE ಖಡಕ್ ಎಚ್ಚರಿಕೆ





