
ACCIDENT : ಓವರ್ಟೇಕ್ ಮಾಡಲು ಹೋಗಿ KSRTC ಬಸ್ಸಿಗೆ ಕಾರು ಡಿಕ್ಕಿ – ಸ್ಥಳದಲ್ಲೇ ಕಾರು ಚಾಲಕ ಸಾವು, ಹಲವರಿಗೆ ಗಂಭೀರ ಗಾಯ
ಓವರ್ಟೇಕ್ ಮಾಡಲು ಹೋಗಿ ಶಿಫ್ಟ್ ಡಿಸೈರ್ ಕಾರೊಂದು KSRTC ಬಸ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮತ್ತೋರ್ವ ಹಾಗೂ ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಮಾಚನಹಳ್ಳಿ ಗೇಟ್ ಬಳಿ ನಡೆದಿದೆ.
READ THIS : ಎಕ್ಸಾಂ ಬರೆದು ಬರ್ತಿದ್ದವನ ಕುತ್ತು ಸೀಳಿದ ಮಾಂಜಾ ದಾರ!

ಸ್ಥಳದಲ್ಲೇ ಕಾರು ಚಾಲಕ ಸಾವು, ಹಲವರು ಗಂಭೀರ!
ಬೆಂಗಳೂರು-ಚಿಂತಾಮಣಿ ಮಾರ್ಗದಲ್ಲಿ ಈ ACCIDENT ಸಂಭವಿಸಿದ್ದು, ಶ್ರೀನಿವಾಸಪುರ ಗ್ರಾಮದ 35 ವರ್ಷದ ಭರತ್ ಕುಮಾರ್ ಮೃತ ಕಾರು ಚಾಲಕ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಕಾರು ಮತ್ತು KSRTC ಬಸ್ ನಡುವೆ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ ಕೂಡ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೂ ಗಾಯಗಳಾಗಿದ್ದು, ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ACCIDENT ಗೆ ಕಾರಣವೇನು..?
ಇನ್ನು ಬೆಂಗಳೂರಿನಿಂದ ಚಿಂತಾಮಣಿಗೆ ಬರುತ್ತಿದ್ದ KSRTC ಬಸ್ಗೆ, ಎದುರಿನಿಂದ ಓವರ್ಟೇಕ್ ಮಾಡಿಕೊಂಡು ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಸಿಐ ಶಿವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಅನ್ನೋದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

MUST WATCH : ಗರ್ಭಿಣಿಗೆ ಚಿಕಿತ್ಸೆ ವಿಳಂಬ ಆರೋಪ – ತುಮಕೂರು ಜಿಲ್ಲಾಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರೋಶ




