ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : KSRTC ಬಸ್-ಕಂಟೇನರ್ ಲಾರಿ ನಡುವೆ ಡಿಕ್ಕಿ.

KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.
ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು
ಅಪಘಾತದ ತೀವ್ರತೆಗೆ ಕೆಎಸ್ಆರ್ಟಿಸಿ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಈ ಅಪಘಾತದಿಂದಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ತಪ್ಪಿದ ಭಾರೀ ಅನಾಹುತ
ಇನ್ನು ಗಾಯಾಳುಗಳನ್ನು ತಕ್ಷಣವೇ ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನ ಸಮಯಪ್ರಜ್ಞೆ ಮತ್ತು ಚಾಕಚಕ್ಯತೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಬಸ್ಗಳ ಮಧ್ಯೆ ಭೀಕರ Accident – ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ

ಪೊಲೀಸ್ ಭೇಟಿ, ಪರಿಶೀಲನೆ
ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣ ಕುರಿತು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಅಪಘಾತದ ಬಳಿಕ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.

ಇದನ್ನು ನೋಡಿ : ಶಾಸಕ ಹೆಚ್.ವಿ ವೆಂಕಟೇಶ್ ಗೆ ಮಂತ್ರಿಗಿರಿ ಕೊಡಿ ಕಾಡುಗೊಲ್ಲರ ಸಂಘದಿಂದ ಹೈಕಮಾಂಡ್ ಗೆ ಒತ್ತಾಯ




