Accident : ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ.!

Accident : ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ, ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಲಾರಿಗೆ ಬೊಲೆರೋ ಗೂಡ್ಸ್ ಡಿಕ್ಕಿಯಾಗಿ ಭೀಕರ Accident.. ಇಬ್ಬರು ಸಾವು.!
ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ಗಳನ್ನು ತುಂಬಿಕೊಂಡು ಬೆಂಗಳೂರಿನಿಂದ ಚಿತ್ರದುರ್ಗದತ್ತ ತೆರಳುತ್ತಿದ್ದ ಲಾರಿಗೆ, ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೊಲೆರೋ ಗೂಡ್ಸ್ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಚಾಲಕ ಷಣ್ಮುಗ (50 ವರ್ಷ) ಹಾಗೂ ಹಿರಿಯೂರು ಮೂಲದ 30 ವರ್ಷದ ರಂಗನಾಥ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ವ್ಯಕ್ತಿಯ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಶಾಲಾ ಬಸ್ ಹರಿದು 2 ವರ್ಷದ ಮಗು ಸಾವು.!

ಘಟನಾ ಸ್ಥಳಕ್ಕೆ ಕೋರಾ ಪೊಲೀಸರ ಭೇಟಿ
ಬೊಲೆರೋ ಗೂಡ್ಸ್ ವಾಹನ ಬೆಂಗಳೂರಿನಿಂದ ಚಿತ್ರದುರ್ಗದತ್ತ ತೆರಳುತ್ತಿತ್ತು ಎನ್ನಲಾಗಿದೆ. ಈ ವೇಳೆ ಸೋರೆಕುಂಟೆ ಬಳಿ ಟ್ರ್ಯಾಕ್ಟರ್ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕೋರಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
MUST WATCH : UNDERPASS ಮಾಡೋವರೆಗೂ ಬಿಡಲ್ಲ- HIGHWAY ತಡೆದು ಗ್ರಾಮಸ್ಥರ ಆಕ್ರೋಶ




