Accident : ಚೆನ್ನೈ – ಬೆಂಗಳೂರು ಎಕ್ಸ್ಪ್ರೆಸ್ ವೇಯಲ್ಲಿ ಡಿವೈಡರ್ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಮೂವರು ದುರ್ಮರಣ

ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತಗಳ ಸರಣಿ ಮುಂದುವರಿದಿದ್ದು, ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಐವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
READ THIS : ತುಮಕೂರು- ಕುಣಿಗಲ್ ರಸ್ತೆಯಲ್ಲಿ ಭೀಕರ Accident – ಬೈಕ್ ಸವಾರರು ಸಾವು

ಮೂವರು ದಾರುಣ ಸಾವು, ಓರ್ವ ಗಂಭೀರ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಬಳಿ ಈ Accident ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಘಟನೆಯಲ್ಲಿ ಮತ್ತೊಬ್ಬ ಗಂಭೀರ ಗಾಯಗಳಾಗಿದ್ದು, ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ದಾಖಲು!
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತರು ಹಾಗೂ ಗಾಯಾಳುಗಳು ಪುಣೆ ಮೂಲದವರು ಎನ್ನಲಾಗಿದೆ. ಅಪಘಾತದ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

MUST WATCH : ಕಾಟಾಚಾರಕ್ಕೆ ಬರ ವಿಶೇಷ ಅಧಿವೇಶನ – ಸರ್ಕಾರದ ವಿರುದ್ದ ಸುರೇಶ್ ಬಾಬು ವಾಗ್ದಾಳಿ




