
RAMANAGARA : ಎಕ್ಸ್ಪ್ರೆಸ್ ಹೈವೆಯಲ್ಲಿ ಅಪಘಾತ – ಕಾರು ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವು
ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ರಸ್ತೆ ದಾಟಲು ಯತ್ನಿಸುತ್ತಿದ್ದ 22 ವರ್ಷದ ಯುವತಿಗೆ ಕಾರು ಡಿಕ್ಕಿಯಾಗಿ, ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ನಡೆದಿದೆ.
ಎಕ್ಸ್ಪ್ರೆಸ್ ಹೈವೆಯಲ್ಲಿ ಅಪಘಾತ
ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ 22 ವರ್ಷದ ಭೂಮಿಕಾ ಮೃತಪಟ್ಟ ಯುವತಿ. ಭೂಮಿಕಾ ತಮ್ಮ ಸ್ನೇಹಿತರೊಂದಿಗೆ ಚನ್ನಪಟ್ಟಣಕ್ಕೆ ಬಂದಿದ್ದರು ಎನ್ನಲಾಗಿದೆ. ತಡರಾತ್ರಿ ಸಂಕಲಗೆರೆ ಬಳಿ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇ ದಾಟಲು ಮುಂದಾಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.
READ THIS : ಮಗ ಸಾವು – ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಕಾರು ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವು
ಭೂಮಿಕಾ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭೂಮಿಕಾ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
RAMANAGARA – ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
MUST WATCH : ನೀರಿನಲ್ಲಿ ಮುಳುಗಿ ತಾಯಿ-ಮಗ ಸಾ* – ಅಪಾಯದಿಂದ ಪಾರಾದ ತಂದೆ-ಮಗಳು




