ನಟ Darshan ಪುತ್ರನಿದ್ದ ಕಾರು ಅಪಘಾತ – ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ

ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿ ನಟ Darshan ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಫೋರ್ಡ್ ಎಂಡೋವರ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿನೀಶ್ ತಾಯಿ ವಿಜಯಲಕ್ಷ್ಮೀ ಪೋಸ್ಟ್
ಅಪಘಾತದ ಬಳಿಕ ಸೋಶಿಯಲ್ ಮಿಡಿಯಾಗಳಲ್ಲಿ ವಿನೀಶ್ ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದರು, ಅವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಇದೀಗ ಈ ಎಲ್ಲಾ ಸುಳ್ಳು ಸುದ್ದಿಗಳಿಗೆ ವಿನೀಶ್ ತಾಯಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತೆರೆ ಎಳೆದಿದ್ದಾರೆ. ಅಪಘಾತ ಸಂಭವಿಸಿದ ವೇಳೆ ವಿನೀಶ್ ಕಾರು ಚಾಲನೆ ಮಾಡುತ್ತಿರಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ : Vijayalakshmi ವಿರುದ್ಧ ಪೊಲೀಸರಿಗೇ ಅಸಮಾಧಾನ! ಏನಾಯ್ತು?

Darshan ಮಗನ ಕಾರು ಅಪಘಾತ – ಇಂತಹ ಸಣ್ಣಪುಟ್ಟ ಅಪಘಾತಗಳು ಸಾಮಾನ್ಯ
ಅಪಘಾತ ನಡೆದ ತಕ್ಷಣ ವಿನೀಶ್ ಕಾರಿನಿಂದ ಇಳಿದು ಗಾಯಗೊಂಡ ದ್ವಿಚಕ್ರ ವಾಹನ ಸವಾರನಿಗೆ ನೆರವಾಗಿದ್ದಾರೆ. ಸ್ಥಳದಿಂದ ಓಡಿಹೋಗಿಲ್ಲ. ಬೆಂಗಳೂರಿನ ಟ್ರಾಫಿಕ್ ಪರಿಸ್ಥಿತಿಯಲ್ಲಿ ಇಂತಹ ಸಣ್ಣಪುಟ್ಟ ಅಪಘಾತಗಳು ಸಾಮಾನ್ಯ ಎಂದು ಅವರು ಹೇಳಿದ್ದಾರೆ.

ವಿನೀಶ್ ಕುರಿತು ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ಯಾರೂ ನಂಬಬಾರದು ಎಂದು ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮನವಿ ಮಾಡಿದ್ದಾರೆ.

ಇದನ್ನು ನೋಡಿ : ಒಬ್ಬಂಟಿಯಾಗಿ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಕೆ




