ನಟ Doddanna ಅವರು ನಿಧನರಾಗಿದ್ದಾರೆ ಎಂಬ ಆಘಾತಕಾರಿ ಸುಳ್ಳು ಸುದ್ದಿ ಮತ್ತು ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಹಿರಿಯ ನಟ Doddanna ಅವರ ಸಾವಿನ ಕುರಿತು ಸೋಶಿಯಲ್ ಮಿಡಿಯಾಗಳಲ್ಲಿ ಹರಿದಾಡಿದ್ದ ಸುಳ್ಳು ಸುದ್ದಿಯ ಬೆನ್ನಲ್ಲೇ, ಕಂಟಕ ಪರಿಹಾರಕ್ಕಾಗಿ ಅವರು ಆಂಜನೇಯ ದೇವರ ಮೊರೆ ಹೋಗಿದ್ದಾರೆ. ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದಿದ್ದಾರೆ.
ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೆ ಬಿಡುವುದಿಲ್ಲ
ಶುಕ್ರವಾರ ಬೆಳಗ್ಗೆ ಕೆಲ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಡಿದ್ದರು. ಈ ಸುದ್ದಿ ಅಭಿಮಾನಿಗಳು, ಸ್ನೇಹಿತರು ಹಾಗೂ ಕುಟುಂಬಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಸುದ್ದಿ ವೈರಲ್ ಆಗುತ್ತಿದ್ದಂತೆಯೇ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದ ದೊಡ್ಡಣ್ಣ, ತಾವು ಸಂಪೂರ್ಣ ಆರೋಗ್ಯವಾಗಿದ್ದು, ತಮ್ಮ ಸಾವಿನ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದರು.
ಇದನ್ನು ಓದಿ : ನಾನು ಆರೋಗ್ಯವಾಗಿದ್ದೇನೆ, ನಿಧನದ ಸುಳ್ಳು ಸುದ್ದಿಗೆ ಹಿರಿಯ ನಟ Dodanna ಸ್ಪಷ್ಟನೆ..!!

ಕಾನೂನು ಕ್ರಮ ಕೈಗೊಳ್ಳುತ್ತೇನೆ
ನಿಮ್ಮೆಲ್ಲರ ಆಶೀರ್ವಾದ ಇರುವವರೆಗೆ ನಾನು ಚೆನ್ನಾಗಿರುತ್ತೇನೆ ಎಂಬ ನಂಬಿಕೆ ಇದೆ. ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ದೊಡ್ಡಣ್ಣ ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.
ಈ ಘಟನೆ ಬೆನ್ನಲ್ಲೇ ಕಂಟಕ ಪರಿಹಾರ ಹಾಗೂ ದೇವರ ಆಶೀರ್ವಾದಕ್ಕಾಗಿ ದೊಡ್ಡಣ್ಣ ಅವರು ಕುಟುಂಬ ಸಮೇತರಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನು ನೋಡಿ : SHIVAMOGGA ನಗರದಲ್ಲಿ ರಕ್ತದೋಕುಳಿ ಅಡಿದ ಕಿರಾತಕರು- ಮಾರಕಾಸ್ತ್ರಗಳಿಂದ ಕೊಚ್ಚಿ ಕೊ*ಗೈದ್ರು




