
3 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ PAWAN KALYAN!
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್, ತಮ್ಮ ಪತ್ನಿ ಅನ್ನಾ ಕೊನಿಡಾಲಗೆ ವಿಚ್ಛೇದನ ನೀಡಿದ್ದಾರೆ. ಈ ಮೂಲಕ ತಮ್ಮ 13 ವರ್ಷಗಳ ವೈವಾಹಿಕ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಹೌದು.. ತೆಲುಗು ಚಿತ್ರರಂಗದ ಜನಪ್ರಿಯ ನಟ ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪವನ್ ಕಲ್ಯಾಣ್, ಅನ್ನಾ ಕೊನಿಡಾಲ ದಂಪತಿ ಪರಸ್ಪರ ಒಪ್ಪಿಗೆ ಹಾಗೂ ಗೌರವದೊಂದಿಗೆ ಬೇರೆಯಾಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ವಿಡಿಯೋದಲ್ಲಿ ದಂಪತಿ ಹೇಳಿದ್ದೇನು?
ಪವನ್ ಕಲ್ಯಾಣ್ ಅವರು 2011ರಲ್ಲಿ ಬಿಡುಗಡೆಯಾದ ತೀನ್ ಮಾರ್ ಚಿತ್ರದ ಚಿತ್ರೀಕರಣದ ವೇಳೆ ರಷ್ಯಾ ಮೂಲದ ಅನ್ನಾ ಲೆಜ್ನೆವಾ ಅವರನ್ನು ಭೇಟಿಯಾಗಿ ಪ್ರೀತಿಸಿ ವಿವಾಹವಾಗಿದ್ರು. ಇನ್ನು 2023ರಲ್ಲಿ ಪವನ್ ಕಲ್ಯಾಣ್ ಮತ್ತು ಅನ್ನಾ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆಗ ದಂಪತಿಯು ಸೋಶಿಯಲ್ ಮಿಡಿಯಾದಲ್ಲಿ ಸಂತೋಷದ ಫೋಟೋ ಹಂಚಿಕೊಳ್ಳುವ ಮೂಲಕ ಈ ವದಂತಿಗಳಿಗೆ ತೆರೆ ಎಳೆದಿತ್ತು. ಇದೀಗ ಈ ದಂಪತಿ 13 ವರ್ಷಗಳ ದಾಂಪತ್ಯ ಜೀವನದ ಬಳಿಕ ಬೇರೆಯಾಗಲು ನಿರ್ಧರಿಸಿದ್ದಾರೆ. ಇನ್ನು ಈ ಕುರಿತು ಇಬ್ಬರೂ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಪರಸ್ಪರ ಒಪ್ಪಿಗೆ ಮತ್ತು ಗೌರವದೊಂದಿಗೆ ಈ ನಿರ್ಧಾರ ಕೈಗೊಂಡಿದ್ಧೇವೆ. ಮದುವೆ ಸಂಬಂಧ ಅಂತ್ಯಗೊಂಡರೂ ಉತ್ತಮ ಸ್ನೇಹಿತರಾಗಿ ಮುಂದುವರಿಯುತ್ಥೇವೆ ಎಂದು ಹೇಳಿದ್ದಾರೆ.
READ THIS : ಬೆಂಗಳೂರಲ್ಲಿ ತಲ್ವಾರ್ ಹಿಡಿದು ವಿಕೃತಿ ಮೆರೆದ ಪವನ್ ಕಲ್ಯಾಣ್ ಅಭಿಮಾನಿಗಳು

13 ವರ್ಷಗಳ ದಾಂಪತ್ಯ ಜೀವನ ಅಂತ್ಯ
ಇನ್ನು ಪವನ್ ಕಲ್ಯಾಣ್ ಈ ಹಿಂದೆ ಎರಡು ಬಾರಿ ಮದುವೆಯಾಗಿದ್ರು. 1997ರಲ್ಲಿ ನಂದಿನಿ ಎಂಬುವರನ್ನು ವಿವಾಹವಾಗಿದ್ದರು. ಆದರೆ 1999ರಲ್ಲಿ ಇವರಿಬ್ಬರೂ ಬೇರ್ಪಟ್ಟಿದ್ರು. ಬಳಿಕ 2009ರಲ್ಲಿ ಅವರು ನಟಿ ರೇಣು ದೇಸಾಯಿ ಅವರನ್ನು ಮದುವೆಯಾದ್ರು. ಈ ದಂಪತಿಗೆ ಒಬ್ಬ ಮಗಳು ಮತ್ತು ಒಬ್ಬ ಮಗನಿದ್ದಾರೆ. 2012ರಲ್ಲಿ ಇವರ ವಿವಾಹವು ವಿಚ್ಛೇದನದೊಂದಿಗೆ ಅಂತ್ಯಗೊಂಡಿತ್ತು. ಇದಾದ ಬಳಿಕ 2013ರಲ್ಲಿ ರಷ್ಯಾ ಮೂಲದ ಅನ್ನಾ ಕೊನಿಡೇಲಾ ಅವರನ್ನು ಪವನ್ ಕಲ್ಯಾಣ್ ಮದುವೆಯಾಗಿದ್ರು. ಈ ದಂಪತಿಗೆ ಪೊಲೆನಾ ಅಂಜನಾ ಪವಣೋವಾ ಮತ್ತು ಮಾರ್ಕ್ ಶಂಕರ್ ಪವಣೋವಿಚ್ ಎಂಬ ಇಬ್ಬರು ಮಕ್ಕಳಿದ್ದಾರೆ. ಇದೀಗ 13 ವರ್ಷಗಳ ದಾಂಪತ್ಯದ ಬಳಿಕ ಇಬ್ಬರೂ ಬೇರೆಯಾಗಲು ನಿರ್ಧರಿಸಿದ್ದಾರೆ.
ಅಭಿಮಾನಿಗಳಿಗೆ ಶಾಕ್!
ಒಟ್ಟಿನಲ್ಲಿ, ಚಿತ್ರರಂಗ ಮತ್ತು ರಾಜಕೀಯ ಎರಡರಲ್ಲೂ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಅವರ ವೈಯಕ್ತಿಕ ಬದುಕಿನ ಈ ಬೆಳವಣಿಗೆ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

MUST WATCH : ಮಹಿಳೆಯರಿಗೆ ಬಂಪರ್ ಗಿಫ್ಟ್…ಸರ್ಕಾರಿ ಯೋಜನೆಯಿಂದ ಸಿಕ್ತು ನೆರವು



