ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ Jayamma ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ ಇಂದು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ನಿವಾಸದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತದಿಂದ ನಿಧನ
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಫಿಲ್ಮ್ ಚೇಂಬರ್ನ ಮಾಜಿ ಅಧ್ಯಕ್ಷ ಹಾಗೂ ನಿರ್ಮಾಪಕ ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರಿಗೆ ಇಂದು ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ವರನಟ ಡಾ ರಾಜ್ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ಕುಮಾರ್. ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಅವರ ಸ್ವಂತ ಸಹೋದರ ಎಸ್.ಎ ಚಿನ್ನೇಗೌಡ, ಜಯಮ್ಮ ಇವರ ಪತ್ನಿ ಜಯಮ್ಮ.
ಇದನ್ನು ಓದಿ : ಖ್ಯಾತ ಪತ್ರಕರ್ತ ಪಿ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ನಿಧನ!

ನಿರ್ಮಾಪಕಿ Jayamma
ನಿರ್ಮಾಪಕಿಯಾಗಿಯೂ ಆಗಿದ್ದ Jayamma ಅವರು 2006ರಲ್ಲಿ ಪತಿ ಎಸ್.ಎ. ಚಿನ್ನೇಗೌಡ ಅವರೊಂದಿಗೆ ಸೇರಿ ಪುತ್ರ ವಿಜಯ್ ರಾಘವೇಂದ್ರ ನಟನೆಯ ‘ಸೇವಂತಿ ಸೇವಂತಿ’ ಚಿತ್ರವನ್ನು ನಿರ್ಮಿಸಿದ್ದರು. ಎಸ್. ನಾರಾಯಣ್ ನಿರ್ದೇಶನದ ಈ ಚಿತ್ರದಲ್ಲಿ ನಟಿ ರಮ್ಯಾ ನಾಯಕಿಯಾಗಿ ಅಭಿನಯಿಸಿದ್ದು, ಸಿನಿಮಾ 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿತ್ತು.

ಅನೇಕ ಕಲಾವಿದರು, ನಿರ್ಮಾಪಕರು ಸಂತಾಪ
2008ರಲ್ಲಿ ಬಿಡುಗಡೆಯಾದ ವಿಜಯ್ ರಾಘವೇಂದ್ರ ಅಭಿನಯದ ‘ಗಣೇಶ ಮತ್ತೆ ಬಂದ’ ಚಿತ್ರಕ್ಕೂ ಜಯಮ್ಮ ನಿರ್ಮಾಪಕಿಯಾಗಿದ್ದರು. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಅವರು ಗುರುತಿಸಿಕೊಂಡಿದ್ದರು. ಜಯಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ನಿರ್ಮಾಪಕರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಇದನ್ನು ನೋಡಿ : JUNE 18ಕ್ಕೆ ವಿಧಾನ ಪರಿಷತ್ ಚುನಾವಣೆ – ಕೈ ಶಾಸಕರು RESORTಗೆ SHIFT ?




