ಆಗುಂಬೆ ಘಾಟ್ ನಲ್ಲಿ ಭೂಕುಸಿತದ ಭೀತಿ..!

Agumbe Ghatನಲ್ಲಿ ನಿರಂತರ ಮಳೆಯಿಂದ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಈ ಕುರಿತು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಆಗುಂಬೆ ಘಾಟಿಯಲ್ಲಿ ಭೂಕುಸಿತದ ಭೀತಿ
ಆಗುಂಬೆ ಘಾಟಿನ ರಾಷ್ಟ್ರೀಯ ಹೆದ್ದಾರಿ 169ಎ, ತೀರ್ಥಹಳ್ಳಿ–ಮಲ್ಪೆ ಮಾರ್ಗದ ಆಗುಂಬೆ ಘಾಟಿಯಲ್ಲಿ ನಿರಂತರ ಮಳೆಯಿಂದ ಮಣ್ಣು ಸಂಪೂರ್ಣ ತೇವಗೊಂಡಿದ್ದು, ಯಾವುದೇ ಕ್ಷಣದಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸೆಪ್ಟೆಂಬರ್ 30ರವರೆಗೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ : SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಡೆಡ್ಲಿ ಆಕ್ಸಿಡೆಂ*

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಬ್ರೇಕ್
ಆಗುಂಬೆ ಘಾಟಿಯ ಚೆಕ್ಪೋಸ್ಟ್ಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿಯೊಂದು ವಾಹನವನ್ನು ಪರಿಶೀಲಿಸಿದ ಬಳಿಕವೇ ಮುಂದಕ್ಕೆ ಬಿಡಲಾಗುತ್ತಿದೆ. ನಿಗದಿತ ಮಾನದಂಡಗಳನ್ನು ಪೂರೈಸುವ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದ್ದು, ಭಾರೀ ವಾಹನಗಳನ್ನು ಪರ್ಯಾಯ ಮಾರ್ಗ ಬಳಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ ಸುರಕ್ಷಿತ ಪ್ರಯಾಣ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
MUST WATCH : ಏಕಾಏಕಿ KSRTC BUS ಪಲ್ಟಿ – 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ




