Ballari ಯ ಖಾಸಗಿ ಕಾಲೇಜಿನ ಉಪನ್ಯಾಸಕನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

Ballari : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ನನ್ನು ಪೊಲೀಸರು ಬಂಧಿಸಿದ್ದಾರೆ. ಪಿಯುಸಿ ವಿದ್ಯಾರ್ಥಿನಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ ಆರೋಪಿ, ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ನಂತರ ಆರೋಪಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿರುವ ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯ ಪೋಷಕರು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
MUST WATCH : ದೇವರ ತಾಳಿಯನ್ನೇ ಟಾರ್ಗೆಟ್ ಮಾಡ್ತಿದ್ದ ಅಂತರ್ ರಾಜ್ಯ ಕಳ್ಳರನ್ನ ಬೇಟೆಯಾಡಿದ ಖಾಕಿ | TURUVEKERE NEWS |




