DK ಸಂಪುಟದ 13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ 13 ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು (ಜೂನ್ 08) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಕೊಠಡಿ ಹಂಚಿಕೆ ಪಟ್ಟಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಿಶೇಷವಾಗಿ ನಾಲ್ಕು ಕೊಠಡಿಗಳನ್ನು ನೀಡಿರುವುದು ಗಮನ ಸೆಳೆದಿದೆ. ವಿಧಾನಸೌಧದ 335, 336, 337 ಹಾಗೂ 337A ಕೊಠಡಿಗಳನ್ನು ಅವರಿಗೆ ಹಂಚಿಕೆ ಮಾಡಲಾಗಿದ್ದು, ಈ ಮೂಲಕ ಅವರನ್ನು ಸಮಾಧಾನಪಡಿಸುವ ಪ್ರಯತ್ನ ಇದಾಗಿದೆ ಎನ್ನಲಾಗಿದೆ. ಈ ಹಿಂದೆ ಡಿಸಿಎಂ ಆಗಿದ್ದಾಗ ಡಿ.ಕೆ.ಶಿವಕುಮಾರ್ ಬಳಸುತ್ತಿದ್ದ ಕಚೇರಿ ಸಿಎಂ ಕಚೇರಿಯಂತೆ ನವೀಕರಣ ಮಾಡಿಸಿದ್ದರು. ಈಗ ಅದೇ ಕೊಠಡಿಗಳನ್ನು ಸಚಿವ ರಾಮಲಿಂಗಾರೆಡ್ಡಿಗೆ ಬಿಟ್ಟುಕೊಟ್ಟಿದ್ದಾರೆ.
ಇದನ್ನು ಓದಿ : ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಭಾರೀ ಡಿಮ್ಯಾಂಡ್.!

ಸಚಿವರಿಗೆ ಹಂಚಿಕೆಯಾದ ಪ್ರಮುಖ ಕೊಠಡಿಗಳು:
- ಪರಮೇಶ್ವರ್ ಉಪ ಮುಖ್ಯಮಂತ್ರಿ (ಕಂದಾಯ ಮತ್ತು ಯುವಸಬಲೀಕರಣ) – ವಿಧಾನಸೌಧ 327/327a
- ಕೆ.ಎಚ್ ಮುನಿಯಪ್ಪ, (ಆಹಾರ ಸಚಿವ)- ವಿಧಾನಸೌಧ – 340a/341/341a
- ಯತೀಂದ್ರ ಸಿದ್ದರಾಮಯ್ಯ, (ನಗರಾಭಿವೃದ್ಧಿ ಸಚಿವ) – ವಿಧಾನಸೌಧ, 314/314a
- ಕೆಜೆ ಜಾರ್ಜ್ (ಇಂಧನ ಮತ್ತು ಪ್ರವಾಸೋದ್ಯುಮ) – ವಿಧಾನಸೌಧ, 317/317a
- ಎಂಬಿ ಪಾಟೀಲ್, (ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ) – ವಿಧಾನಸೌಧ – 344/344a
- ರಾಮಲಿಂಗಾರೆಡ್ಡಿ, (ಜಲಸಂಪನ್ಮೂಲ ಸಚಿವ) – ವಿಧಾನಸೌಧ, 335/336/337/337a
- ಕೃಷ್ಣ ಬೈರೇಗೌಡ, ಸಚಿವ -(ಬೆಂಗಳೂರು ನಗರಾಭಿವೃದ್ಧಿ ಸಚಿವ) ವಿಕಾಸಸೌಧ, 244/245
- ಪ್ರಿಯಾಂಕ್ ಖರ್ಗೆ, (ಗೃಹ ಇಲಾಖೆ ಮತ್ತು ಐಟಿಬಿಟಿ) – ವಿಕಾಸ ಸೌಧ, 242, 243
- ಯುಟಿ ಖಾದರ್, (ಆರೋಗ್ಯ ಸಚಿವ) – ವಿಧಾನಸೌಧ, 315/315a
- ಬೈರತಿ ಸುರೇಶ್, (ಸಾರಿಗೆ ಸಚಿವ) – ವಿಧಾನಸೌಧ, 316/316a
- ಸತೀಶ್ ಜಾರಕಿಹೊಳಿ, (ಲೋಕೋಪಯೋಗಿ ಸಚಿವ) – ವಿಕಾಸಸೌಧ, 444/445
- ಈಶ್ವರ್ ಖಂಡ್ರೆ, (ಗ್ರಾಮೀಣಾಭಿವೃದ್ಧಿ ಸಚಿವ) – ವಿಕಾಸಸೌಧ, 36/37
- ಶರಣಪ್ರಕಾಶ್ ಪಾಟೀಲ್, (ವೈದ್ಯಕೀಯ ಶಿಕ್ಷಣ ಸಚಿವ) – ವಿಕಾಸಸೌಧ. 344/345

ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಹೊಸ ಪ್ರವೇಶ ದ್ವಾರ
ಕುಮಾರಕೃಪಾ ಅತಿಥಿ ಗೃಹವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿಯಾಗಿ ಬಳಸಲು ನಿರ್ಧರಿಸಲಾಗಿದ್ದು, ಕಚೇರಿಯ ಪ್ರವೇಶ ದ್ವಾರದಲ್ಲೂ ಬದಲಾವಣೆ ಮಾಡಲಾಗಿದೆ. ಈವರೆಗೆ ಪೂರ್ವ ಭಾಗದಲ್ಲಿದ್ದ ಮುಖ್ಯ ಪ್ರವೇಶ ದ್ವಾರವನ್ನು ಬದಲಿಸಿ, ಉತ್ತರ ಭಾಗದಿಂದಲೇ ಪ್ರವೇಶ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಮುಂದೆ DK ಶಿವಕುಮಾರ್ ತಮ್ಮ ಗೃಹ ಕಚೇರಿಗೆ ಉತ್ತರ ದ್ವಾರದಿಂದಲೇ ಪ್ರವೇಶಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ನೋಡಿ : ಹಾಡಹಗಲೇ ಅಟ್ಟಹಾಸ ಮೆರೆದ ದುಷ್ಕರ್ಮಿಗಳು ಅಟ್ಟಾಡಿಸಿ ರೌಡಿಶೀಟರ್ ನನ್ನ ಕೊ* ಹಂತಕರು




