Andhra Pradesh: ಆಂಧ್ರಪ್ರದೇಶದ ಕುಪ್ಪಂನಲ್ಲಿ (Kuppam) ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing Student) ಹಾಸ್ಟೆಲ್ ಕಟ್ಟಡದ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Andhra Pradesh : ಆಂಧ್ರಪ್ರದೇಶದ ಕುಪ್ಪಂ ಪಟ್ಟಣದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಯುವತಿಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ.
ನರ್ಸಿಂಗ್ 2ನೇ ವರ್ಷದ ವಿದ್ಯಾರ್ಥಿನಿಯ ಆತ್ಮಹತ್ಯೆ
ವಿದ್ಯಾರ್ಥಿನಿಯು ಕುಪ್ಪಂನ ಖಾಸಗಿ ಕಾಲೇಜೊಂದರಲ್ಲಿ 2ನೇ ವರ್ಷದ ಬಿಎಸ್ಸಿ ನರ್ಸಿಂಗ್ ಪದವಿ ಓದುತ್ತಿದ್ದು, ಕೆಲವು ದಿನಗಳಿಂದ ಮಾನಸಿಕ ಒತ್ತಡ ಮತ್ತು ಸಮಸ್ಯೆಗಳನ್ನು ಎದುರಿಸುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : Shivamogga Girl suicide : ಹಾಸ್ಟೆಲ್ ಟೆರಸ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ನವೆಂಬರ್ 20 ರಂದು ಹಾಸ್ಟೆಲ್ ಕಟ್ಟಡದ 4ನೇ ಮಹಡಿಯಿಂದ ಪಲ್ಲವಿ ಜಿಗಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ನವೆಂಬರ್ 21ರಂದು ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಕುಟುಂಬಸ್ಥರಿಂದ ಕಾಲೇಜಿನ ವಿರುದ್ಧ ಆರೋಪ
ಈ ಘಟನೆಗೆ ಸಂಬಂಧಿಸಿದಂತೆ, ಪಲ್ಲವಿಯು ಹಾರಿ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ. ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬಸ್ಥರು ಕಾಲೇಜು ಸಿಬ್ಬಂದಿಯ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿನಿಯ ಸಾವು ಕುರಿತಂತೆ ಪೊಲೀಸರು ತನಿಖೆ
ಸ್ಥಳೀಯ ಪೊಲೀಸರು ಶಂಕಿತ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
MUST WATCH: TUMAKURU | ಏಕಾಏಕಿ ನೇ*ಗೆ ಕೊರಳೊಡ್ಡಿದ NURSING STUDENT – ಮುಗಿಲುಮುಟ್ಟಿದ ಪೋಷಕರ ಆಕ್ರಂದನ




