Anekal ಪೊಲೀಸರ ಭರ್ಜರಿ ಭೇಟೆ – ಮಾದಕ ಜಾಲದ ವಿದೇಶಿ ಮಹಿಳೆಯ ಬಂಧನ

ಬೆಂಗಳೂರು ಹೊರವಲಯದ ಆನೇಕಲ್ ಉಪವಿಭಾಗದಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನೈಜೀರಿಯಾ ಮೂಲದ ಮಹಿಳೆಯೊಬ್ಬಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತಳಿಂದ 180 ಗ್ರಾಂ ಕೊಕೇನ್ ವಶ
ಬಂಧಿತಳಿಂದ ಸುಮಾರು 18 ಲಕ್ಷ ರೂಪಾಯಿ ಮೌಲ್ಯದ 180 ಗ್ರಾಂ ಕೊಕೇನ್ ವಶಪಡಿಸಿಕೊಂಡಿದ್ದು, ಬಂಧಿತ ಮಹಿಳೆಯನ್ನ 34 ವರ್ಷದ ಬ್ಲೆಸ್ಸಿಂಗ್ ಒಪುಟಾ ಎಂದು ಗುರುತಿಸಲಾಗಿದೆ.
ಇದನ್ನು ಓದಿ : Bengaluru ನಲ್ಲಿ ಬೃಹತ್ ಡ್ರಗ್ಸ್ ಜಾಲ ಭೇದನೆ – 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ..!!

ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ
Anekal ತಾಲೂಕಿನ ಅಲಯನ್ಸ್ ಕಾಲೇಜು ಸಮೀಪ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಕೊಕೇನ್ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇದನ್ನು ನೋಡಿ : RCB FANSಗೆ ಖಾಕಿ ಶಾಕ್ ನಿಯಮ ಉಲ್ಲಂಘಿಸಿದವರಿಗೆ ಬಿತ್ತು ಫೈನ್




