ಅನ್ನಭಾಗ್ಯ ಪರಿಷ್ಕರಣೆ : 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಮರುಪರಿಶೀಲನೆಯ ಬೆನ್ನಲ್ಲೇ ಇದೀಗ ಅನ್ನಭಾಗ್ಯ ಯೋಜನೆಗೂ ಕತ್ತರಿ ಬೀಳುವ ಸಾಧ್ಯತೆಗಳ ಬಗ್ಗೆ ಚರ್ಚೆ ಆರಂಭವಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಈ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.
ಅನರ್ಹರು ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ಅನ್ನಭಾಗ್ಯ ಯೋಜನೆಯ ಲಾಭ ನಿಜವಾದ ಬಡವರಿಗೆ ತಲುಪಿಸುವುದು ಸರ್ಕಾರದ ಉದ್ದೇಶ ಎಂದು ಸ್ಪಷ್ಟಪಡಿಸಿದ್ದಾರೆ. ಅನರ್ಹರು ಯೋಜನೆಯ ಸೌಲಭ್ಯ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ.

13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ
ಪ್ರಸ್ತುತ ಸುಮಾರು 13ರಿಂದ 14 ಲಕ್ಷ ಜನರು ಅನರ್ಹರಾಗಿದ್ದರೂ BPL ಕಾರ್ಡ್ ಹೊಂದಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇದೆ. ಈ ಹಿನ್ನೆಲೆಯಲ್ಲಿ ಅಂತಹ ಕಾರ್ಡ್ಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅನರ್ಹರು ಸ್ವಯಂಪ್ರೇರಿತರಾಗಿ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಿಗೆ ಪರಿವರ್ತಿಸಿಕೊಳ್ಳುವಂತೆ ಸರ್ಕಾರ ಈ ಹಿಂದೆಯೇ ಮನವಿ ಮಾಡಿತ್ತು. ಆದರೂ ಸಾಕಷ್ಟು ಮಂದಿ ಬದಲಾವಣೆ ಮಾಡದೇ ಇರುವುದರಿಂದ ಈಗ ಸರ್ಕಾರವೇ ಪರಿಶೀಲನೆ ನಡೆಸಲು ಮುಂದಾಗಿದೆ.
ಇದನ್ನು ಓದಿ : Hotel ಮಾಲೀಕರಿಗೆ ಗುಡ್ ನ್ಯೂಸ್ ಕೊಟ – KH Muniyappa..!!
ಸರ್ಕಾರದ ಬೊಕ್ಕಸಕ್ಕೆ ಉಳಿತಾಯ
ಅನರ್ಹರನ್ನು ಪಟ್ಟಿಯಿಂದ ಹೊರಗಿಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದ್ದು, ನಿಜವಾದ ಅರ್ಹ ಫಲಾನುಭವಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತದೆ ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಚಿವರು ತಿಳಿಸಿದರು.

ಆ್ಯಪ್ ಮೂಲಕ ಪರಿಷ್ಕರಣೆ
ರಾಜ್ಯ ಸರ್ಕಾರವು ಅನರ್ಹರು ಮತ್ತು ಶ್ರೀಮಂತರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವುದನ್ನು ತಡೆಯುವ ಉದ್ದೇಶದಿಂದ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ.
ಈ ಪ್ರಕ್ರಿಯೆಯನ್ನು ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ ಅರ್ಹರನ್ನು ಮಾತ್ರ ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಇದನ್ನು ನೋಡಿ : ರಸ್ತೆಗೆ ಕಸ ಎಸೆದು ಸಿಕ್ಕಿಬಿದ್ದ ಭೂಪ – ಅದೇ ಕಸವನ್ನ ಅವನಿಂದಲೇ ಬಾಚಿಸಿದ ಪಾಲಿಕೆ




