BJP ಗೆ ರಾಜೀನಾಮೆ ಬೆನ್ನಲ್ಲೆ ಹೊಸ ರಾಜಕೀಯ ಚಳುವಳಿ ಪ್ರಾರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ.

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಅಣ್ಣಾಮಲೈ (K. Annamalai) ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಪಕ್ಷದ ನಾಯಕತ್ವದೊಂದಿಗೆ ಉಂಟಾದ ಭಿನ್ನಾಭಿಪ್ರಾಯಗಳೇ ತಮ್ಮ ನಿರ್ಧಾರಕ್ಕೆ ಕಾರಣ ಎಂದು ತಿಳಿಸಿದ್ದಾರೆ.
ಬಿಜೆಪಿಯಿಂದ ಹೊರಬಂದಿದ್ದೇಕೆ ಅಣ್ಣಾಮಲೈ?
ರಾಜೀನಾಮೆ ಬಳಿಕ ಮಾತನಾಡಿದ ಅವರು, ತಮಿಳುನಾಡಿನ ರಾಜಕೀಯ ದಿಕ್ಕು ಹಾಗೂ ಪಕ್ಷದ ಕಾರ್ಯತಂತ್ರದ ಕುರಿತು ಕಳೆದ 18 ತಿಂಗಳಿನಿಂದ ನಾಯಕತ್ವದೊಂದಿಗೆ ಹಲವು ಬಾರಿ ಚರ್ಚೆ ನಡೆದಿದ್ದರೂ ಯಾವುದೇ ಒಮ್ಮತ ಮೂಡಲಿಲ್ಲ ಎಂದು ಹೇಳಿದ್ದಾರೆ. ಪಕ್ಷಕ್ಕೆ ತೊಂದರೆ ಉಂಟುಮಾಡುವ ಉದ್ದೇಶ ಇಲ್ಲದ ಕಾರಣ BJP ಯಿಂದ ಹೊರಬರುವ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಮೋದಿ ಬಗ್ಗೆ ಗೌರವ ಮುಂದುವರಿಕೆ
ಪಕ್ಷದಿಂದ ಹೊರಬಂದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮಗೆ ಗೌರವವಿದೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ. ರಾಜಕೀಯ ಪಯಣದಲ್ಲಿ ಪಕ್ಷ ನೀಡಿದ ಅವಕಾಶ, ವಿಶ್ವಾಸ ಹಾಗೂ ಬೆಂಬಲಕ್ಕೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
BJP ಗೆ ರಾಜೀನಾಮೆ ಬೆನ್ನಲ್ಲೆ ಹೊಸ ರಾಜಕೀಯ ಚಳುವಳಿ ಪ್ರಾರಂಭ
ರಾಜೀನಾಮೆಯ ಬೆನ್ನಲ್ಲೇ ಹಿರಿಯ ನಟ ರಜನೀಕಾಂತ್ ಅವರು ತಮ್ಮೊಂದಿಗೆ ಸೇರಿಕೊಳ್ಳುವಂತೆ ಮನವಿ ಮಾಡಿದ್ದರು ಎಂದು ಅಣ್ಣಾಮಲೈ ತಿಳಿಸಿದ್ದಾರೆ. ಆದರೆ, ತಾವು ಯಾವುದೇ ಪಕ್ಷವನ್ನು ಸೇರುವ ಉದ್ದೇಶ ಹೊಂದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸ್ವಂತ ರಾಜಕೀಯ ಚಳುವಳಿಯನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ.
ಇದನ್ನು ಓದಿ : ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ – ಯಾಕೆ?

BJP ಗೆ ರಾಜೀನಾಮೆ – ಹೊಸ ರಾಜಕೀಯ ಹಾದಿ
ತಮಿಳುನಾಡಿನ ರಾಜಕೀಯದಲ್ಲಿ ಹೊಸ ಬದಲಾವಣೆ ತರಲು ಸ್ವತಂತ್ರ ರಾಜಕೀಯ ಮಾರ್ಗವನ್ನು ರೂಪಿಸುವ ಗುರಿ ಹೊಂದಿರುವುದಾಗಿ ಅಣ್ಣಾಮಲೈ ಹೇಳಿದ್ದಾರೆ. ಅಗತ್ಯವಿದ್ದರೆ ಏಕಾಂಗಿಯಾಗಿ ಹೋರಾಡಲು ಸಿದ್ಧನಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ನೋಡಿ : ಗ್ರಾಮೀಣ ಕುಡಿಯುವ ನೀರಿಗೆ ನನ್ನ ಆದ್ಯತೆ – ನೂತನ ಸಚಿವ ESHWAR KHANDRE ಹೇಳಿಕೆ




