ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್! ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸಲು CWMA ಸೂಚನೆ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳ ನೀರಿನ ಸಂಗ್ರಹದ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ನಡುವೆಯೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ಪ್ರತಿನಿತ್ಯ 3,000 ಕ್ಯೂಸೆಕ್ ನೀರು
ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ನಂತೆ 15 ದಿನ ನೀರು ಹರಿಸಲು ಶಿಫಾರಸು ಮಾಡಲಾಗಿತ್ತು ಎನ್ನಲಾಗಿದೆ. ಇದರ ಪ್ರಕಾರ ಒಟ್ಟು ಸುಮಾರು 3.91 ಟಿಎಂಸಿ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಶಿಫಾರಸನ್ನು ಪಾಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
READ THIS : ‘ಕಾವೇರಿ’ ಶಾಕ್ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ

ಹೆಚ್ಚುವರಿ ನೀರು ಹರಿಸಲು ಸಾಧ್ಯವಿಲ್ಲ
ಇನ್ನು ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಹೀಗಾಗಿ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಪ್ರಾಧಿಕಾರದ ಮುಂದೆ ವಾದ ಮಂಡಿಸಿತ್ತು. ಆದರೆ ಕರ್ನಾಟಕದ ಮನವಿಯನ್ನು ಒಪ್ಪದೆ ನಿಯಂತ್ರಣ ಸಮಿತಿಯ ಶಿಫಾರಸಿನಂತೆ ನೀರು ಹರಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಜಲಾಶಯಗಳಲ್ಲಿ ನೀರಿನ ಸಂಗ್ರಹದ ಬಗ್ಗೆ ಆತಂಕ
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಬಗ್ಗೆ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ವಿಚಾರ ಕರ್ನಾಟಕದ ಮುಂದಿನ ಪ್ರಮುಖ ಸವಾಲಾಗಿ ಪರಿಣಮಿಸಿದೆ.

MUST WATCH : THOಗಳ ಕಾರ್ಯವೈಖರಿಗೆ ಖಾದರ್ ಗರಂ ತುಮಕೂರಲ್ಲಿ THOಗಳಿಗೆ ಖಡಕ್ ವಾರ್ನಿಂಗ್




